Zechariah 4:6 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ಅದಕ್ಕೆ ಉತ್ತರಿಸಿ, “ಇದು ಯೆಹೋವನಿಂದ ಜೆರುಬ್ಬಾಬೆಲನಿಗೆ ಕೊಟ್ಟ ಸಂದೇಶವಾಗಿದೆ. ‘ನಿನ್ನ ಸಹಾಯವು ನಿನ್ನ ಸ್ವಂತ ಶಕ್ತಿಸಾಮರ್ಥ್ಯದಿಂದ ಬರುವದಿಲ್ಲ. ಅದು ನನ್ನ ಆತ್ಮದಿಂದಲೇ ನಿನಗೆ ದೊರಕುವದು.’ ಇದು ಸರ್ವಶಕ್ತನಾದ ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವನು ನನಗೆ ಪ್ರತ್ಯುತ್ತರವಾಗಿ ಹೀಗೆ ಹೇಳಿದನು, “ಪರಾಕ್ರಮದಿಂದಲ್ಲ, ಬಲದಿಂದಲ್ಲ. ನನ್ನ ಆತ್ಮದಿಂದಲೇ ಎಂಬುದು ಸೇನಾಧೀಶ್ವರನಾದ ಯೆಹೋವನ ನುಡಿ” ಎಂಬ ಈ ಮಾತುಗಳನ್ನು ಯೆಹೋವನು ಜೆರುಬ್ಬಾಬೆಲನಿಗೆ ದಯಪಾಲಿಸಿದ್ದಾನೆ.
Kannada BSI Bible 2016
ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು ಉತ್ತರಕೊಟ್ಟು ನನಗೆ ಹೇಳಿದ್ದೇನಂದರೆ--ಜೆರುಬ್ಬಾಬೆಲನಿಗೆ ಕರ್ತನ ವಾಕ್ಯವು ಇದೇ--ಬಲ ದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವನು ನನಗೆ ಪ್ರತ್ಯುತ್ತರವಾಗಿ ಹೀಗೆ ಹೇಳಿದನು - ಪರಾಕ್ರಮದಿಂದಲ್ಲ, ಬಲದಿಂದಲ್ಲ, ನನ್ನ ಆತ್ಮದಿಂದಲೇ ಎಂಬದು ಸೇನಾಧೀಶ್ವರ ಯೆಹೋವನ ನುಡಿ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವನು, “ಜೆರುಬ್ಬಾಬೆಲನಿಗೆ ಯೆಹೋವ ದೇವರ ವಾಕ್ಯವು ಇದೇ: ‘ಪರಾಕ್ರಮದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.