Zechariah 4:7 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಉನ್ನತವಾದ ಶಿಖರವು ಜೆರುಬ್ಬಾಬೆಲನಿಗೆ ಸಮತಟ್ಟಾದ ನೆಲದಂತಿರುವುದು. ಅವನು ಆಲಯವನ್ನು ಕಟ್ಟುವನು. ಅದರ ಅತಿ ವಿಶೇಷವಾದ ಕಲ್ಲನ್ನಿಟ್ಟ ಬಳಿಕ ಜನರೆಲ್ಲರೂ, ‘ಬಹಳ ಚಂದ, ಬಹಳ ಚಂದ’ ಎಂದು ಆರ್ಭಟಿಸುವರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೊಡ್ಡ ಬೆಟ್ಟವೇ, “ನೀನು ಯಾರು? ಜೆರುಬ್ಬಾಬೆಲನ ಮುಂದೆ ನೆಲಸಮವಾಗುವಿ; ಅವನು ಕಲಶದ ಕಲ್ಲನ್ನು ಕೋಲಾಹಲದೊಡನೆ ಮೆರವಣಿಗೆ ಮಾಡುವನು; ಇದರ ಮೇಲೆ ದೇವರ ದಯೆಯಿರಲಿ ” ಎಂಬ ಜನಘೋಷವಾಗುವುದು.
Kannada BSI Bible 2016
ಓ ಮಹಾ ಬೆಟ್ಟವೇ, ನೀನ್ಯಾರು? ಜೆರುಬ್ಬಾಬೆಲನ ಮುಂದೆ ಬೈಲಾಗುವಿ; ಅದಕ್ಕೆ--ಕೃಪೆಯೇ, ಕೃಪೆಯೇ ಎಂದು ಅರ್ಭಟಗಳ ಸಂಗಡ ಮುಖ್ಯ ಕಲ್ಲನ್ನು ಅವನು ಹೊರಗೆ ತರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಂಬೀ ಮಾತನ್ನು ಯೆಹೋವನು ಜೆರುಬ್ಬಾಬೆಲನಿಗೆ ದಯಪಾಲಿಸಿದ್ದಾನೆ. ದೊಡ್ಡ ಬೆಟ್ಟವೇ, ನೀನು ಯಾರು? ಜೆರುಬ್ಬಾಬೆಲನ ಮುಂದೆ ನೆಲಸಮವಾಗುವಿ; ಅವನು ಕಲಶದ ಕಲ್ಲನ್ನು ಕೋಲಾಹಲದೊಡನೆ ಮೆರವಣಿಗೆಮಾಡುವನು; ಇದರ ಮೇಲೆ ದೇವರ ದಯೆಯಿರಲಿ, ದೇವರ ದಯೆಯಿರಲಿ ಎಂಬ ಜನಘೋಷವಾಗುವದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಪರಾಕ್ರಮದ ಬೆಟ್ಟವೇ, ನೀನ್ಯಾರು? ಜೆರುಬ್ಬಾಬೆಲನ ಮುಂದೆ ಬಯಲಾಗುವೆ. ಅವನು ಕಲಶದ ಕಲ್ಲನ್ನು ಸ್ಥಾಪಿಸಿ, ‘ದೇವರು ಇದನ್ನು ಆಶೀರ್ವದಿಸಲಿ! ದೇವರು ಇದನ್ನು ಆಶೀರ್ವದಿಸಲಿ!’ ಎಂದು ಘೋಷಿಸುವನು.”