Zechariah 4:9 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಜೆರುಬ್ಬಾಬೆಲನು ನನ್ನ ಆಲಯದ ಅಸ್ತಿವಾರವನ್ನು ಹಾಕುವನು. ಜೆರುಬ್ಬಾಬೆಲನು ಆಲಯವನ್ನು ಕಟ್ಟಿ ಮುಗಿಸುವನು. ಆಗ ನೀವು ಸರ್ವಶಕ್ತನಾದ ಯೆಹೋವನು ನಿಮ್ಮ ಬಳಿಗೆ ನನ್ನನ್ನು ಕಳುಹಿಸಿದ್ದಾನೆಂದು ತಿಳಿಯುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಜೆರುಬ್ಬಾಬೆಲನ ಕೈಗಳು ಈ ಆಲಯದ ಅಸ್ತಿವಾರವನ್ನು ಹಾಕಿವೆ. ಆ ಕೈಗಳೇ ಇದನ್ನು ಪೂರೈಸುವವು. ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದವನು ಸೇನಾಧೀಶ್ವರನಾದ ಯೆಹೋವನೇ” ಎಂದು ನನಗೆ ಗೊತ್ತಾಗುವುದು.
Kannada BSI Bible 2016
ಜೆರುಬ್ಬಾಬೆಲನ ಕೈಗಳು ಈ ಮನೆಯ ಅಸ್ತಿವಾರವನ್ನು ಹಾಕಿವೆ, ಅವನ ಕೈಗಳು ಸಹ ಅದನ್ನು ಪೂರೈಸುವವು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಜೆರುಬ್ಬಾಬೆಲನ ಕೈಗಳು ಈ ಆಲಯದ ಅಸ್ತಿವಾರವನ್ನು ಹಾಕಿವೆ, ಆ ಕೈಗಳೇ ಇದನ್ನು ಪೂರೈಸುವವು; ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದವನು ಸೇನಾಧೀಶ್ವರ ಯೆಹೋವನೇ ಎಂದು ನಿನಗೆ ಗೊತ್ತಾಗುವದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಜೆರುಬ್ಬಾಬೆಲನ ಕೈಗಳು ಈ ಆಲಯದ ಅಸ್ತಿವಾರವನ್ನು ಹಾಕಿವೆ, ಅವನ ಕೈಗಳೇ ಅದನ್ನು ಪೂರೈಸುವುವು. ಆಗ ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆಂದು ತಿಳಿಯುವಿರಿ.