Zechariah 5:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಅವರು ಶಿನಾರಿನಲ್ಲಿ ಅದಕ್ಕೊಂದು ಮನೆ ಕಟ್ಟುವದಕ್ಕಿದ್ದಾರೆ. ಮನೆಕಟ್ಟಿದ ಬಳಿಕ ಆ ಬುಟ್ಟಿಯನ್ನು ಅವರು ಅದರೊಳಗಿಡುವರು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೂತನು ನನಗೆ, “ಶಿನಾರ್ ದೇಶದಲ್ಲಿ ಅವಳಿಗೆ ಮನೆಕಟ್ಟುವುದಕ್ಕಾಗಿ ಹೋಗುತ್ತಾರೆ. ಅಲ್ಲಿ ಅದು ಸ್ಥಾಪಿಸಲ್ಪಟ್ಟು ತನ್ನ ಸ್ವಂತ ಸ್ಥಾನದಲ್ಲಿ ಇರಿಸಲ್ಪಡುವುದು” ಎಂದನು.
Kannada BSI Bible 2016
ಅವನು ನನಗೆ --ಶಿನಾರ್ ದೇಶದಲ್ಲಿ ಅದಕ್ಕೆ ಮನೆ ಕಟ್ಟುವದಕ್ಕಾಗಿ ತಕ್ಕೊಂಡು ಹೋಗುತ್ತಾರೆ; ಅಲ್ಲಿ ಅದು ಸ್ಥಾಪಿಸಲ್ಪಟ್ಟು ತನ್ನ ಸ್ಥಾನದಲ್ಲಿ ಇರಿಸಲ್ಪಡುವದು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ನನಗೆ - ಶಿನಾರ್ ದೇಶದಲ್ಲಿ ಅವಳಿಗೆ ಮನೆಕಟ್ಟುವದಕ್ಕಾಗಿ ಹೋಗುತ್ತಾರೆ; ಅದು ಸಿದ್ಧವಾದಾಗ ಆ ಸ್ವಂತ ಸ್ಥಳದಲ್ಲಿ ನಿಲ್ಲಿಸಲ್ಪಡುವಳು.
Kannada Bible (KNCL) BSI 2016
ಅದಕ್ಕೆ ಸೂತ್ರಧಾರಿಯಾದ ದೂತನು, “ಬಾಬಿಲೋನಿಯಾ ದೇಶಕ್ಕೆ: ಅಲ್ಲಿ ಅವಳಿಗೆ ಗುಡಿಕಟ್ಟುವುದಕ್ಕಾಗಿ ಹೋಗುತ್ತಿದ್ದಾರೆ. ಅದು ಸಿದ್ಧವಾದಾಗ ಅಲ್ಲಿನ ಪೀಠದ ಮೇಲೆ ಆ ಕೊಳಗವನ್ನು ಪ್ರತಿಷ್ಠಾಪಿಸಲಾಗುವುದು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೂತನು ನನಗೆ, “ಶಿನಾರ್ ದೇಶದಲ್ಲಿ ಅದಕ್ಕೆ ಮನೆ ಕಟ್ಟುವುದಕ್ಕೆ ತೆಗೆದುಕೊಂಡು ಹೋಗುತ್ತಾರೆ. ಅಲ್ಲಿ ಅದು ಸ್ಥಾಪಿತವಾಗಿ, ತನ್ನ ಸ್ಥಾನದಲ್ಲಿ ಇರಿಸಲಾಗುವುದು,” ಎಂದನು.