Zechariah 5:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನಾನು ಆ ಸುರುಳಿಯನ್ನು ಕದಿಯುವವರ ಮನೆಗಳಿಗೂ ಮತ್ತು ನನ್ನ ಹೆಸರಿನ ಮೇಲೆ ಸುಳ್ಳಾಣೆಯಿಡುವವರ ಮನೆಗಳಿಗೂ ಕಳುಹಿಸುವೆನು. ಆ ಸುರುಳಿಯು ಅಲ್ಲಿಯೇ ಇದ್ದು ಆ ಮನೆಗಳನ್ನು ನಾಶಮಾಡುವುದು. ಮನೆಯ ಕಲ್ಲುಕಂಬಗಳನ್ನು, ಮರದ ತೊಲೆಗಳನ್ನು ನಾಶಮಾಡುವದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಶಾಪವನ್ನು ಕಳುಹಿಸುತ್ತೇನೆ. ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನನ್ನ ಅಪ್ಪಣೆಯಂತೆ ಅದು ಕಳ್ಳನ ಮನೆಯಲ್ಲಿಯೂ, ನನ್ನ ಹೆಸರೆತ್ತಿ ಸುಳ್ಳು ಸಾಕ್ಷಿಹೇಳುವವನ ಮನೆಯೊಳಗೆ ನುಗ್ಗಿ ಮತ್ತು ಅವನ ಮನೆಯಲ್ಲಿನ ಮರಗಳನ್ನೂ, ಅದರ ಕಲ್ಲುಗಳನ್ನೂ ನಾಶಮಾಡುವುದು’” ಎಂದು ಹೇಳಿದನು.
Kannada BSI Bible 2016
ನಾನು ಅದನ್ನು ಹೊರಗೆ ತರುತ್ತೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಅದು ಕಳ್ಳನ ಮನೆಯಲ್ಲಿಯೂ ನನ್ನ ಹೆಸರಿನಿಂದ ಸುಳ್ಳಾಗಿ ಆಣೆಯಿಡುವವನ ಮನೆಯ ಲ್ಲಿಯೂ ಪ್ರವೇಶಿಸಿ ಅವನ ಮನೆಯ ಮಧ್ಯದಲ್ಲಿ ನಿಂತು ಅದರ ಮರಗಳನ್ನೂ ಅದರ ಕಲ್ಲುಗಳನ್ನೂ ಅಳಿಸಿಬಿಡುವದು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನನ್ನ ಅಪ್ಪಣೆಯಂತೆ ಇದು ಹೊರಟು ಕಳ್ಳನ ಮನೆಯೊಳಗೂ ನನ್ನ ಹೆಸರೆತ್ತಿ ಸುಳ್ಳುಸಾಕ್ಷಿ ಹೇಳುವವನ ಮನೆಯೊಳಗೂ ನುಗ್ಗಿ ನಟ್ಟನಡುವೆ ನೆಲೆಗೊಂಡು ಅದನ್ನು ಕಲ್ಲುಮರ ಸಹಿತವಾಗಿ ನಾಶಮಾಡುವದು ಎಂದು ಹೇಳಿದನು.
Kannada Bible (KNCL) BSI 2016
ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ನಾನು ಶಾಪವನ್ನು ಕಳುಹಿಸುತ್ತೇನೆ. ಅದು ಕಳ್ಳನ ಮನೆಯನ್ನೂ ನನ್ನ ಹೆಸರೆತ್ತಿ ಸುಳ್ಳಾಣೆಯಿಡುವವನ ಮನೆಯನ್ನೂ ಹೊಕ್ಕು, ಅಲ್ಲಿ ತಂಗಿದ್ದು ಅದನ್ನು ಕಲ್ಲುಮರ ಸಹಿತ ಸಂಪೂರ್ಣವಾಗಿ ಭಸ್ಮಮಾಡುವುದು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ನಾನು ಶಾಪವನ್ನು ಕಳುಹಿಸುತ್ತೇನೆ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ. ಅದು ಕಳ್ಳನ ಮನೆಯಲ್ಲಿಯೂ, ನನ್ನ ಹೆಸರಿನಿಂದ ಸುಳ್ಳಾಗಿ ಆಣೆ ಇಡುವವನ ಮನೆಯಲ್ಲಿಯೂ ಪ್ರವೇಶಿಸಿ, ಅವನ ಮನೆಯಲ್ಲಿ ನಿಂತು, ಅದನ್ನೂ, ಅದರ ಮರಗಳನ್ನೂ, ಅದರ ಕಲ್ಲುಗಳನ್ನೂ ನಾಶಮಾಡುವುದು.’ ”