Zechariah 5:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಅದು ಏನೋ ನನಗೆ ಗೊತ್ತಾಗುತ್ತಿಲ್ಲ. ಅದು ಏನಿರಬಹುದು?” ಎಂದು ನಾನು ವಿಚಾರಿಸಿದೆನು. ಅದಕ್ಕವನು, “ಅದು ಒಂದು ಅಳೆಯುವ ಬುಟ್ಟಿ, ಈ ಬುಟ್ಟಿಯು ಈ ದೇಶದ ಜನರ ಪಾಪವನ್ನು ಅಳೆಯುವ ಬುಟ್ಟಿಯಾಗಿದೆ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು, “ಏನದು?” ಎಂದು ಕೇಳಿದ್ದಕ್ಕೆ ಅವನು, “ಇದು ಅಳೆಯುವ ಬುಟ್ಟಿ” ಎಂದನು. ಇದಲ್ಲದೆ ಅವನು, “ಇದೇ ಸಮಸ್ತ ಭೂಮಿಯಲ್ಲಿಯ ಜನರ ಅಧರ್ಮವು ” ಎಂದನು.
Kannada BSI Bible 2016
ನಾನು --ಇದೇನು ಅಂದಾಗ ಅವನು--ಇದು ಹೊರಡು ವಂಥ ಎಫವು ಅಂದನು; ಇದಲ್ಲದೆ ಅವನು--ಇದೇ ಸಮಸ್ತ ಭೂಮಿಯಲ್ಲಿ ಅವರ ಹೋಲಿಕೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏನದು ಎಂದು ಕೇಳಿದ್ದಕ್ಕೆ ಅವನು - ಕಂಡುಬರುತ್ತಿರುವ ಆ ವಸ್ತು ಒಂದು ಕೊಳಗಪಾತ್ರೆ ಎಂದು ತಿಳಿಸಿದನು. ಅಲ್ಲದೆ - ಅದು ಪೂರ್ಣದೇಶದಲ್ಲಿನ ಪಾಪಿಗಳ ಅಧರ್ಮವೇ ಅಂದನು.
Kannada Bible (KNCL) BSI 2016
“ಏನದು?” ಎಂದು ನಾನು ವಿಚಾರಿಸಲು, ಅವನು, “ನಿನಗೆ ಕಾಣಿಸುತ್ತಿರುವ ಆ ವಸ್ತು ಒಂದು ಕೊಳಗದ ಪಾತ್ರೆ,” ಎಂದನು. ಅಲ್ಲದೆ, “ಅದು ಇಡೀ ನಾಡಿನ ಅಧರ್ಮದ ಪ್ರತೀಕ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು, “ಇದೇನು?” ಎಂದು ಕೇಳಿದಾಗ, ಅವನು, “ಇದು ಅಳೆಯುವ ಬುಟ್ಟಿ,” ಎಂದನು. ಇದಲ್ಲದೆ ಅವನು, “ಇದೇ ಸಮಸ್ತ ಭೂಮಿಯಲ್ಲಿಯ ಜನರ ಅಧರ್ಮವು,” ಎಂದನು.