Zechariah 5:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಬಳಿಕ ನಾನು ಮೇಲಕ್ಕೆ ನೋಡಿದಾಗ ಕೊಕ್ಕರೆಯಂತೆ ರೆಕ್ಕೆಗಳಿರುವ ಎರಡು ಸ್ತ್ರೀಯರನ್ನು ಕಂಡೆನು. ಅವರು ಹಾರುತ್ತಾ ರೆಕ್ಕೆಗಳಲ್ಲಿಯ ಗಾಳಿಯ ಸಹಾಯದಿಂದ ಬುಟ್ಟಿಯನ್ನು ಎತ್ತಿಕೊಂಡು ಆಕಾಶದಲ್ಲಿ ಹಾರಿಕೊಂಡು ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಕಣ್ಣೆತ್ತಿ ನೋಡಲು, ಆಹಾ ಕೊಕ್ಕರೆಯ ರೆಕ್ಕೆಯಂತಿರುವ ರೆಕ್ಕೆಯುಳ್ಳ ಇಬ್ಬರು ಹೆಂಗಸರು ಕಂಡುಬಂದರು. ಅವರ ರೆಕ್ಕೆಗಳೊಳಗೆ ಗಾಳಿಯು ತುಂಬಿಕೊಂಡಿತ್ತು. ಅವರು ಅಳತೆಯ ಬುಟ್ಟಿಯನ್ನು ಎತ್ತಿಕೊಂಡು ಹಾರಿ ಹೋದರು.
Kannada BSI Bible 2016
ಆಗ ನಾನು ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ಇಬ್ಬರು ಸ್ತ್ರೀಯರು ಹೊರಟರು; ಅವರ ರೆಕ್ಕೆಗಳಲ್ಲಿ ಗಾಳಿ ಇತ್ತು; ಹೌದು, ಅವರ ರೆಕ್ಕೆಗಳು ಕೊಕ್ಕರೆಯ ರೆಕ್ಕೆಗಳ ಹಾಗಿದ್ದವು; ಅವರು ಎಫವನ್ನು ಆಕಾಶಕ್ಕೂ ಭೂಮಿಗೂ ಮಧ್ಯದಲ್ಲಿ ಎತ್ತಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಕಣ್ಣೆತ್ತಿನೋಡಲು ಆಹಾ, ಕೊಕ್ಕರೆಯ ರೆಕ್ಕೆಯಂತಿರುವ ರೆಕ್ಕೆಯುಳ್ಳ ಇಬ್ಬರು ಹೆಂಗಸರು ಕಂಡುಬಂದರು; ಅವರ ರೆಕ್ಕೆಗಳೊಳಗೆ ಗಾಳಿಯು ತುಂಬಿಕೊಂಡಿತ್ತು; ಅವರು ಪೀಪಾಯಿಯನ್ನು ಭೂಮ್ಯಾಕಾಶಗಳ ಅಂತರಾಳದಲ್ಲಿ ಎತ್ತಿಕೊಂಡು ಹೋದರು.
Kannada Bible (KNCL) BSI 2016
ಪುನಃ ನಾನು ಕಣ್ಣೆತ್ತಿ ನೋಡಲು, ಇಗೋ, ಕೊಕ್ಕರೆಯ ರೆಕ್ಕೆಗಳಂತಿರುವ ರಭಸವಾದ ರೆಕ್ಕೆಗಳುಳ್ಳ ಇಬ್ಬರು ಮಹಿಳೆಯರು ಬರುತ್ತಿರುವುದನ್ನು ಕಂಡೆನು. ಅವರು ಕೊಳಗದ ಪಾತ್ರೆಯನ್ನು ಎತ್ತಿಕೊಂಡು ಹಾರಿಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಾನು ಕಣ್ಣೆತ್ತಿ ನೋಡಿದಾಗ, ಇಬ್ಬರು ಸ್ತ್ರೀಯರು ಇದ್ದರು. ಅವರ ರೆಕ್ಕೆಗಳು ರಭಸವಾಗಿದ್ದವು. ಅವರ ರೆಕ್ಕೆಗಳು ಕೊಕ್ಕರೆಯ ರೆಕ್ಕೆಗಳ ಹಾಗಿದ್ದವು. ಅವರು ಆಕಾಶ ಮತ್ತು ಭೂಮಿಯ ನಡುವೆ ಬುಟ್ಟಿಯನ್ನು ಎತ್ತಿದರು.