Zechariah 6:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆತನು ಹೇಳಿದ್ದೇನೆಂದರೆ, “ಹೆಲ್ದಾಯ, ತೋಬೀಯ ಮತ್ತು ಯೆದಾಯ ಇವರು ಬಾಬಿಲೋನಿನಿಂದ ಸೆರೆಯಾಳುಗಳಾಗಿ ಬಂದಿರುತ್ತಾರೆ. ಅವರಿಂದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಚೆಫನ್ಯನ ಮಗನಾದ ಯೋಷೀಯನ ಮನೆಗೆ ಹೋಗಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇನ್ನು ಸೆರೆಯಲ್ಲಿರುವವರೊಳಗೆ ಸೇರಿದವರಾದ ಹೆಲ್ದಾಯ, ತೋಬೀಯ ಮತ್ತು ಯೆದಾಯ ಎಂಬುವರ ಕೈಯಿಂದ ಬೆಳ್ಳಿ ಬಂಗಾರಗಳನ್ನು ತೆಗೆದುಕೋ; ಈ ದಿನವೇ ನೀನು ಹೋಗಿ ಬಾಬೆಲಿನಿಂದ ಬಂದು, ಇವರು ಇಳಿದುಕೊಂಡಿರುವ ಚೆಫನ್ಯನ ಮಗನಾದ ಯೋಷಿಯನ ಮನೆಗೆ ಹೋಗಿ,
Kannada BSI Bible 2016
ಹೇಗಂದರೆ--ಆ ಸೆರೆಯವರಿಂದ ಅಂದರೆ ಬಾಬೆಲಿ ನಿಂದ ಬಂದಿರುವ ಹೆಲ್ದಾಯನಿಂದಲೂ ತೋಬೀಯ ನಿಂದಲೂ ಯೆದಾಯನಿಂದಲೂ ತಕ್ಕೊಂಡು ಅದೇ ದಿವಸದಲ್ಲಿ ನೀನು ಬಂದು ಚೆಫನ್ಯನ ಮಗನಾದ ಯೋಷೀಯನ ಮನೆಗೆ ಹೋಗಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಇನ್ನು ಸೆರೆಯಲ್ಲಿರುವವರೊಳಗೆ ಸೇರಿದವರಾದ ಹೆಲ್ದಾಯ, ತೋಬೀಯ, ಯೆದಾಯ ಎಂಬವರ ಕೈಯಿಂದ ಬೆಳ್ಳಿಬಂಗಾರಗಳನ್ನು ಈಸಿಕೋ; ಈ ದಿವಸವೇ ನೀನು ಹೋಗಿ ಬಾಬೆಲಿನಿಂದ ಬಂದ ಇವರು ಇಳಿದಿರುವ ಚೆಫನ್ಯನ ಮಗನಾದ ಯೋಷೀಯನ ಮನೆಯನ್ನು ಸೇರಿ
Kannada Bible (KNCL) BSI 2016
“ಈ ದಿನವೇ ಜೆಫನ್ಯನ ಮಗನಾದ ಯೋಷೀಯನ ಮನೆಗೆ ಹೋಗು, ಬಾಬಿಲೋನಿಗೆ ಸೆರೆಹೋಗಿ ಮರಳಿ ಬಂದಿಳಿದಿರುವ ಹೆಲ್ದಾಯ, ತೊಬೀಯ, ಯೆದಾಯ ಎಂಬವರಿಂದ ಕಾಣಿಕೆಯನ್ನು ಸ್ವೀಕರಿಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆ ಸೆರೆಯವರಿಂದ, ಅಂದರೆ ಬಾಬಿಲೋನಿನಿಂದ ಬಂದಿರುವ ಹೆಲ್ದಾಯನಿಂದಲೂ, ತೋಬೀಯನಿಂದಲೂ, ಯೆದಾಯನಿಂದಲೂ ಬೆಳ್ಳಿಬಂಗಾರವನ್ನು ತೆಗೆದುಕೊಂಡು, ಅದೇ ದಿವಸದಲ್ಲಿ ನೀನು ಜೆಫನ್ಯನ ಮಗ ಯೋಷೀಯನ ಮನೆಗೆ ಹೋಗು.