Zechariah 6:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಜನರು ಸ್ಮರಿಸಿಕೊಳ್ಳುವಂತೆ ಅವರು ಆ ಕಿರೀಟವನ್ನು ಆಲಯದೊಳಗೆ ಇಡುವರು. ಅದು ಹೆಲ್ದಾಯ, ತೋಬೀಯ, ಯೆದಾಯ ಮತ್ತು ಚೆಫನ್ಯನ ಮಗನಾದ ಹೇನ್‌ನಿಗೆ ಘನತೆಯನ್ನು ತರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಆ ಕಿರೀಟವು ಹೇಲೆಮ್, ತೋಬೀಯ, ಯೆದಾಯ, ಚೆಫನ್ಯನ ಮಗನಾದ ಯೋಷೀಯ ಇವರ ಜ್ಞಾಪಕಾರ್ಥವಾಗಿ ಯೆಹೋವನ ಆಲಯದಲ್ಲಿ ಇಡಲಾಗಿದೆ.
Kannada BSI Bible 2016
ಆ ಕಿರೀಟಗಳು ಹೇಲೆಮನಿಗೂ ತೋಬೀಯನಿಗೂ ಯೆದಾಯನಿಗೂ ಚೆಫನ್ಯನ ಮಗನಾದ ಹೇನನಿಗೂ ಕರ್ತನ ದೇವಾಲಯದಲ್ಲಿ ಜ್ಞಾಪಕಾರ್ಥವಾಗಿ ಇರು ವವು.ದೂರವಾದವರು ಬಂದು ಕರ್ತನ ದೇವಾ ಲಯವನ್ನು ಕಟ್ಟುವರು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ; ನೀವು ನಿಮ್ಮ ದೇವರಾದ ಕರ್ತನ ಶಬ್ದಕ್ಕೆ ಜಾಗ್ರತೆಯಾಗಿ ಕಿವಿಗೊಟ್ಟರೆ ಇದು ನೆರವೇರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕಿರೀಟವು ಹೇಲೆಮ್, ತೋಬೀಯ, ಯೆದಾಯ, ಚೆಫನ್ಯನ ಮಗನಾದ ಹೇನ್, ಇವರ ಜ್ಞಾಪಕಾರ್ಥವಾಗಿ ಯೆಹೋವನ ಆಲಯದಲ್ಲಿ ಇಟ್ಟಿರುವದು.
Kannada Bible (KNCL) BSI 2016
ಅವರ ಕಿರೀಟವು ಹೇಲಮ್, ತೊಬೀಯ, ಯೆದಾಯ ಮತ್ತು ಜೆಫನ್ಯನ ಮಗ ಹೇನ್ - ಇವರ ಜ್ಞಾಪಕಾರ್ಥವಾಗಿ ಆಲಯದಲ್ಲೇ ಇರುವುದು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಕಿರೀಟಗಳು ಹೇಲೆಮ್, ತೋಬೀಯ, ಯೆದಾಯ ಮತ್ತು ಜೆಫನ್ಯನ ಮಗ ಹೇನ್ ಇವರ ಜ್ಞಾಪಕಾರ್ಥವಾಗಿ ಯೆಹೋವ ದೇವರ ಆಲಯದಲ್ಲಿ ಇರುವುವು.