Zechariah 6:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೂರದಲ್ಲಿ ವಾಸಿಸುವ ಜನರು ಬಂದು ಆಲಯವನ್ನು ಕಟ್ಟುವರು. ಆಗ ಯೆಹೋವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ನೀವು ತಿಳಿಯುವಿರಿ. ಯೆಹೋವನು ಹೇಳಿದಂತೆ ನೀವು ಮಾಡಿದರೆ ಇವೆಲ್ಲಾ ನೆರವೇರುವುದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೂರದಲ್ಲಿರುವವರು ಬಂದು ಯೆಹೋವನ ಆಲಯವನ್ನು ಕಟ್ಟುವುದಕ್ಕೆ ಕೈಹಾಕುವರು; ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದಾತನು ಸೇನಾಧೀಶ್ವರನಾದ ಯೆಹೋವನೇ ಎಂದು ನಿಮಗೆ ದೃಢವಾಗುವುದು. ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಮನಃಪೂರ್ವಕವಾಗಿ ಕೇಳಿದರೆ ಇದೆಲ್ಲಾ ನೆರವೇರುವುದು.’”
Kannada BSI Bible 2016
ದೂರವಾದವರು ಬಂದು ಕರ್ತನ ದೇವಾ ಲಯವನ್ನು ಕಟ್ಟುವರು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ; ನೀವು ನಿಮ್ಮ ದೇವರಾದ ಕರ್ತನ ಶಬ್ದಕ್ಕೆ ಜಾಗ್ರತೆಯಾಗಿ ಕಿವಿಗೊಟ್ಟರೆ ಇದು ನೆರವೇರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೂರದಲ್ಲಿರುವವರು ಬಂದು ಯೆಹೋವನ ಆಲಯವನ್ನು ಕಟ್ಟುವದಕ್ಕೆ ಕೈಹಾಕುವರು; ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದಾತನು ಸೇನಾಧೀಶ್ವರ ಯೆಹೋವನೇ ಎಂದು ನಿಮಗೆ ದೃಢವಾಗುವದು. ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಮನಃಪೂರ್ವಕವಾಗಿ ಕೇಳಿದರೆ ಇದೆಲ್ಲಾ ನೆರವೇರುವದು.
Kannada Bible (KNCL) BSI 2016
ದೂರದಲ್ಲಿ ವಾಸಿಸುವ ಜನರು ಅಲ್ಲಿಗೆ ಬಂದು ಸರ್ವೇಶ್ವರಸ್ವಾಮಿಯ ಆಲಯವನ್ನು ಕಟ್ಟುವುದಕ್ಕೆ ನೆರವಾಗುವರು. ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದಾತ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯೇ ಎಂಬುದು ನಿಮಗೆ ಮನದಟ್ಟಾಗುವುದು. ನಿಮ್ಮ ದೇವರಾದ ಆ ಸ್ವಾಮಿಯ ಮಾತನ್ನು ನೀವು ಮನಃಪೂರ್ವಕವಾಗಿ ಅನುಸರಿಸಿದರೆ ಇದೆಲ್ಲವೂ ಸರಿಯಾಗಿ ನೆರವೇರುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೂರದಲ್ಲಿರುವವರು ಬಂದು ಯೆಹೋವ ದೇವರ ಆಲಯವನ್ನು ಕಟ್ಟುವುದಕ್ಕೆ ಸಹಾಯ ಮಾಡುವರು. ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆಂದು ನೀವು ತಿಳಿಯುವಿರಿ. ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ಜಾಗ್ರತೆಯಾಗಿ ಕಿವಿಗೊಟ್ಟರೆ, ಇದು ನೆರವೇರುವುದು.”