Zechariah 6:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೆಂಪು ಮಚ್ಚೆ ಇರುವ ಕುದುರೆಗಳು ತಮಗೆ ನೇಮಕವಾದ ಜಾಗಕ್ಕೆ ಹೋಗಿ ಅದನ್ನು ನೋಡಲು ಆತುರಗೊಂಡಿದ್ದವು. ಆಗ ದೂತನು ಅವುಗಳಿಗೆ, “ಹೋಗಿ, ಭೂಮಿಯ ಮೇಲೆ ಹೋಗಿ ಬನ್ನಿ” ಎಂದು ಹೇಳಿದಾಗ ಅವುಗಳು ಹೋಗಿ ತಮ್ಮ ಪ್ರಾಂತ್ಯದಲ್ಲಿ ನಡೆದಾಡಿದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೆಂಪು ಕುದುರೆಗಳು ಬಂದು ಲೋಕದಲ್ಲಿ ಸಂಚರಿಸುವುದಕ್ಕೆ ಹೊರಡಬೇಕೆಂದು ತ್ವರೆಪಟ್ಟವು; ಆಗ ಅವನು, “ಹೊರಡಿರಿ, ಲೋಕದಲ್ಲಿ ಸಂಚರಿಸಿರಿ” ಎಂದು ಅಪ್ಪಣೆ ಮಾಡಲು ಅವು ಲೋಕದಲ್ಲಿ ಸಂಚರಿಸಿದವು.
Kannada BSI Bible 2016
ಕಪಿಲ ವರ್ಣದವುಗಳು ಹೊರಟು ದೇಶದಲ್ಲಿ ಸಂಚಾರ ಮಾಡಹೋಗುವದಕ್ಕೆ ನೋಡಿದವು ಅಂದನು. ಆಗ ಅವನು--ಹೋಗಿ ದೇಶದಲ್ಲಿ ಅತ್ತಿತ್ತ ನಡೆದಾಡುವದಕ್ಕೆ ಇಲ್ಲಿಂದ ಹೋಗಿರಿ ಅಂದನು; ಹಾಗೆ ಅವು ದೇಶದಲ್ಲಿ ಅತ್ತಿತ್ತ ತಿರುಗಾಡಿದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೆಂಪು ಕುದುರೆಗಳು ಬಂದು ಲೋಕದಲ್ಲಿ ಸಂಚರಿಸುವದಕ್ಕೆ ಹೊರಡಬೇಕೆಂದು ತ್ವರೆಪಟ್ಟವು; ಅವನು - ಹೊರಡಿರಿ, ಲೋಕದಲ್ಲಿ ಸಂಚರಿಸಿರಿ ಎಂದಪ್ಪಣೆಮಾಡಲು ಅವು ಲೋಕದಲ್ಲಿ ಸಂಚರಿಸಿದವು.
Kannada Bible (KNCL) BSI 2016
“ಕೆಂಪು ಕುದುರೆಗಳು ಲೋಕದಲ್ಲೆಲ್ಲ ಗಸ್ತು ತಿರುಗಿ,” ಎಂದು ಅಪ್ಪಣೆಮಾಡಲು, ಅವು ಅಂತೆಯೇ ಮಾಡಿದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೆಂಪು ಕುದುರೆಗಳ ರಥ ಹೊರಟು ಲೋಕದಲ್ಲಿ ಸಂಚಾರ ಮಾಡಲು ಹೋಗುವುದಕ್ಕೆ ನೋಡಿದವು. ಆಗ ಅವನು, “ಹೋಗಿ ಲೋಕದಲ್ಲಿ ಅತ್ತಿತ್ತ ನಡೆದಾಡುವುದಕ್ಕೆ ಇಲ್ಲಿಂದ ಹೋಗಿರಿ,” ಎಂದನು. ಹಾಗೆ ಅವು ದೇಶದಲ್ಲಿ ಅತ್ತಿತ್ತ ತಿರುಗಾಡಿದವು.