Zechariah 8:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಈ ಜನರು ನೆಮ್ಮದಿಯಿಂದ ಭೂಮಿಯ ಮೇಲೆ ನಡೆಯುವರು. ಅವರ ದ್ರಾಕ್ಷಾಲತೆಗಳು ದ್ರಾಕ್ಷಿಹಣ್ಣನ್ನು ಕೊಡುವವು. ದೇಶವು ಸಮೃದ್ಧಿಯಾದ ಬೆಳೆಯನ್ನು ಕೊಡುವದು. ಆಕಾಶವು ಮಳೆಯನ್ನು ಸುರಿಸುವದು. ಇವೆಲ್ಲವನ್ನು ನಾನು ನನ್ನ ಜನರಿಗೆ ಕೊಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೆಮ್ಮದಿಯ ಬೆಳೆಯಾಗುವುದು; ದ್ರಾಕ್ಷಾಲತೆಯು ಹಣ್ಣುಬಿಡುವುದು, ಭೂಮಿಯು ಧಾನ್ಯವನ್ನೀಯುವುದು, ಆಕಾಶವು ಇಬ್ಬನಿಯನ್ನು ಸುರಿಸುವುದು; ಈ ಜನಶೇಷದವರು ಇವುಗಳನ್ನೆಲ್ಲಾ ಅನುಭವಿಸುವಂತೆ ಅನುಗ್ರಹಿಸುವೆನು.
Kannada BSI Bible 2016
ಬೀಜವುವೃದ್ಧಿಯಾಗುವದು; ದ್ರಾಕ್ಷೇ ಬಳ್ಳಿ ತನ್ನ ಫಲವನ್ನು ಕೊಡುವದು; ಭೂಮಿಯು ತನ್ನ ಹುಟ್ಟುವಳಿಯನ್ನು ಹೆಚ್ಚಾಗಿ ಕೊಡುವದು; ಆಕಾಶ ಗಳು ತಮ್ಮ ಮಂಜನ್ನು ಕೊಡುವವು; ಈ ಜನರಲ್ಲಿ ಉಳಿದವರು ಇವುಗಳನ್ನೆಲ್ಲಾ ಸ್ವಾಧೀನ ಮಾಡಿಕೊಳ್ಳು ವಂತೆ ಮಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೆಮ್ಮದಿಯ ಬೆಳೆಯಾಗುವದು; ದ್ರಾಕ್ಷಾಲತೆಯು ಹಣ್ಣುಬಿಡುವದು, ಭೂವಿುಯು ಧಾನ್ಯವನ್ನೀಯುವದು, ಆಕಾಶವು ಇಬ್ಬನಿಯನ್ನು ಸುರಿಸುವದು; ಈ ಜನಶೇಷದವರು ಇವುಗಳನ್ನೆಲ್ಲಾ ಅನುಭವಿಸುವಂತೆ ಅನುಗ್ರಹಿಸುವೆನು.
Kannada Bible (KNCL) BSI 2016
ಜನರು ನೆಮ್ಮದಿಯಿಂದ ಬಿತ್ತನೆ ಮಾಡುವರು. ದ್ರಾಕ್ಷಾಲತೆ ಹಣ್ಣುಬಿಡುವುದು. ಭೂಮಿಯಲ್ಲಿ ಬೆಳೆಯಾಗುವುದು. ಆಕಾಶ ಮಳೆಯನ್ನು ಸುರಿಸುವುದು. ಅಳಿದುಳಿದ ಜನರಿಗೆ ಈ ಸೌಭಾಗ್ಯ ಲಭಿಸುವಂತೆ ಮಾಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೀಜವು ವೃದ್ಧಿಯಾಗುವುದು. ದ್ರಾಕ್ಷಿಬಳ್ಳಿ ತನ್ನ ಫಲವನ್ನು ಕೊಡುವುದು. ಭೂಮಿಯು ತನ್ನ ಹುಟ್ಟುವಳಿಯನ್ನು ಹೆಚ್ಚಾಗಿ ಕೊಡುವುದು. ಆಕಾಶಗಳು ತಮ್ಮ ಮಂಜನ್ನು ಕೊಡುವುವು. ಈ ಜನರಲ್ಲಿ ಉಳಿದವರು, ಇವುಗಳನ್ನೆಲ್ಲಾ ಸ್ವಾಧೀನ ಮಾಡಿಕೊಳ್ಳುವಂತೆ ಮಾಡುವೆನು.