Zechariah 8:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರು ಇಸ್ರೇಲ್ ಮತ್ತು ಯೆಹೂದದ ಹೆಸರುಗಳನ್ನು ಶಾಪ ಇಡುವದಕ್ಕಾಗಿ ಉಪಯೋಗಿಸುವರು. ಆದರೆ ನಾನು ಇಸ್ರೇಲ್ ಮತ್ತು ಯೆಹೂದವನ್ನು ಸಂರಕ್ಷಿಸುವೆನು. ಆ ಹೆಸರುಗಳು ಆಶೀರ್ವದಿಸುವದಕ್ಕಾಗಿ ಉಪಯೋಗಿಸಲ್ಪಡುವದು. ಆದ್ದರಿಂದ ಭಯಪಡಬೇಡಿ, ಬಲಶಾಲಿಗಳಾಗಿರಿ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದ ಕುಲವೇ, ಇಸ್ರಾಯೇಲ್ ವಂಶವೇ, ನಿಮ್ಮ ಹೆಸರು ಹೇಗೆ ಜನಾಂಗಗಳಲ್ಲಿ ಶಾಪದ ಮಾತಾಗಿ ಸಲ್ಲುತ್ತಿತ್ತೋ, ಹಾಗೆಯೇ ನಾನು ನಿಮ್ಮನ್ನು ರಕ್ಷಿಸಿ ಆಶೀರ್ವದಿಸುವೆನು; ಹೆದರಬೇಡಿರಿ, ನಿಮ್ಮ ಕೈಗಳು ಬಲಗೊಳ್ಳಲಿ!”
Kannada BSI Bible 2016
ಆಗುವದೇನಂದರೆ, ಓ ಯೆಹೂದದ ಮನೆತನದವರೇ, ಇಸ್ರಾಯೇಲಿನ ಮನೆತನದವರೇ, ನೀವು ಜನಾಂಗಗಳಲ್ಲಿ ಶಾಪವಾಗಿದ್ದ ಪ್ರಕಾರ ನಾನು ನಿಮ್ಮನ್ನು ರಕ್ಷಿಸುವೆನು ಮತ್ತು ನೀವು ಆಶೀರ್ವಾದವಾಗಿರುವಿರಿ; ಭಯಪಡಬೇಡಿರಿ; ನಿಮ್ಮ ಕೈಗಳು ಬಲವಾಗಿರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದ ಕುಲವೇ, ಇಸ್ರಾಯೇಲ್ ವಂಶವೇ, ನಿಮ್ಮ ಹೆಸರು ಹೇಗೆ ಜನಾಂಗಗಳಲ್ಲಿ ಶಾಪದ ಮಾತಾಗಿ ಸಲ್ಲುತ್ತಿತ್ತೋ ಹಾಗೆಯೇ ನಾನು ನಿಮ್ಮನ್ನು ರಕ್ಷಿಸಿದ ಮೇಲೆ ನಿಮ್ಮ ಹೆಸರು ಹರಕೆಯ ಮಾತಾಗಿ ಸಲ್ಲುವದು; ಹೆದರಬೇಡಿರಿ, ನಿಮ್ಮ ಕೈಗಳು ಬಲಗೊಳ್ಳಲಿ!
Kannada Bible (KNCL) BSI 2016
ಜುದೇಯದ ಕುಲಸ್ಥರೇ, ಇಸ್ರಯೇಲ್ ವಂಶಜರೇ, ರಾಷ್ಟ್ರಗಳಲ್ಲಿ ನಿಮ್ಮ ಹೆಸರು ಶಾಪಕ್ಕೆ ಅಡ್ಡ ಹೆಸರಾಗಿತ್ತು. ಆದರೆ ನಾನು ನಿಮ್ಮನ್ನು ಉದ್ಧರಿಸಿ ನಿಮ್ಮ ಹೆಸರು ಶುಭಸೂಚ್ಯವಾಗುವಂತೆ ಮಾಡುವೆನು. ಹೆದರಬೇಡಿ; ನಿಮ್ಮ ಕೈ ಮುಂದಾಗಲಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದದ ಮನೆತನದವರೇ, ಇಸ್ರಾಯೇಲಿನ ಮನೆತನದವರೇ ನೀವು ಜನಾಂಗಗಳಲ್ಲಿ ಶಾಪವಾಗಿದ್ದ ಪ್ರಕಾರ, ನಾನು ನಿಮ್ಮನ್ನು ರಕ್ಷಿಸುವೆನು ಮತ್ತು ನೀವು ಆಶೀರ್ವಾದವಾಗಿರುವಿರಿ, ಭಯಪಡಬೇಡಿರಿ, ನಿಮ್ಮ ಕೈಗಳು ಬಲವಾಗಿರಲಿ.