Zechariah 8:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನಿಮ್ಮ ಪೂರ್ವಿಕರು ನನ್ನನ್ನು ಕೋಪಗೊಳಿಸಿದರು. ಆದ್ದರಿಂದ ಅವರನ್ನು ನಾಶಮಾಡಲು ನಾನು ತೀರ್ಮಾನಿಸಿದೆನು. ಮತ್ತು ಈ ತೀರ್ಮಾನವನ್ನು ಬದಲಾಯಿಸುವದೇ ಇಲ್ಲವೆಂದು ನಿರ್ಧರಿಸಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಪೂರ್ವಿಕರು ನನಗೆ ಸಿಟ್ಟೆಬ್ಬಿಸಿದಾಗ ನಿಮಗೆ ಕೇಡುಮಾಡಬೇಕೆಂದು ನಾನು ಕರುಣೆಯಿಲ್ಲದೆ ಸಂಕಲ್ಪಸಿದಂತೆ
Kannada BSI Bible 2016
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಪಿತೃಗಳು ನನಗೆ ಸಿಟ್ಟು ಎಬ್ಬಿಸಿದಾಗ ನಾನು ನಿಮ್ಮನ್ನು ಶಿಕ್ಷಿಸುವದಕ್ಕೆ ಯೋಚಿಸಿದೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ; ನಾನು ಪಶ್ಚಾತ್ತಾಪ ಪಡಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ಪಿತೃಗಳು ನನಗೆ ಸಿಟ್ಟೆಬ್ಬಿಸಿದಾಗ ನಿಮಗೆ ಕೇಡು ಮಾಡಬೇಕೆಂದು ನಾನು ನಿಷ್ಕರುಣಿಯಾಗಿ ಸಂಕಲ್ಪಿಸಿದಂತೆ
Kannada Bible (KNCL) BSI 2016
ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ನಿಮ್ಮ ಪೂರ್ವಜರ ನಿಮಿತ್ತ ನಾನು ಕೋಪಗೊಂಡಾಗ, ನಿಮಗೆ ಕೇಡುಮಾಡಬೇಕೆಂದು ನಿಷ್ಕರುಣಿಯಾಗಿ ಸಂಕಲ್ಪಿಸಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮ್ಮ ಪಿತೃಗಳು ನನಗೆ ಸಿಟ್ಟು ಎಬ್ಬಿಸಿದಾಗ ನಾನು ನಿಮ್ಮನ್ನು ಕರುಣಿಸದೆ, ವಿನಾಶವನ್ನು ಬರಮಾಡಲು ಯೋಚಿಸಿದೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.