Zechariah 8:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನೀವು ಮಾಡಬೇಕಾದದ್ದೇನೆಂದರೆ, ನಿಮ್ಮ ನೆರೆಯವರ ಸಂಗಡ ಸತ್ಯವನ್ನೇ ಆಡಿರಿ. ನಿಮ್ಮ ನಗರಗಳಲ್ಲಿ ಯಾವುದೇ ತೀರ್ಮಾನಗಳನ್ನು ಮಾಡುವುದಾಗಿದ್ದರೂ ಅವು ನ್ಯಾಯವಾದವುಗಳಾಗಿಯೂ ಸತ್ಯವಾದವುಗಳಾಗಿಯೂ ಸಮಾಧಾನವನ್ನು ತರುವಂಥವುಗಳಾಗಿಯೂ ಇರಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀವು ಮಾಡಬೇಕಾದ ಕಾರ್ಯಗಳು ಇವೇ. ಪ್ರತಿಯೊಬ್ಬನೂ ತನ್ನ ನೆರೆಯವನ ಸಂಗಡ ನಿಜವನ್ನೇ ಆಡಲಿ; ನಿಮ್ಮ ಚಾವಡಿಗಳಲ್ಲಿ ಸತ್ಯವನ್ನೂ, ಸಮಾಧಾನವಾದ ನ್ಯಾಯವನ್ನೂ ಸ್ಥಾಪಿಸಿರಿ;
Kannada BSI Bible 2016
ನೀವು ಮಾಡತಕ್ಕ ಕಾರ್ಯಗಳು ಇವೇ--ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನು ಮಾತಾಡಲಿ; ನಿಜವಾದ ಸಮಾಧಾನಕರ ವಾದ ನ್ಯಾಯತೀರ್ವಿಕೆಯನ್ನು ನಿಮ್ಮ ಬಾಗಲು ಗಳಲ್ಲಿ ತೀರಿಸಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಮಾಡಬೇಕಾದ ಕಾರ್ಯಗಳು ಇವೇ - ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ನಿಜವನ್ನೇ ಆಡಲಿ; ನಿಮ್ಮ ಚಾವಡಿಗಳಲ್ಲಿ ಸತ್ಯವನ್ನೂ ಸಮಾಧಾನಪ್ರದನ್ಯಾಯವನ್ನೂ ಸ್ಥಾಪಿಸಿರಿ;
Kannada Bible (KNCL) BSI 2016
“ನೀವು ಮಾಡಬೇಕಾದುದು ಏನೆಂದರೆ: ಪ್ರತಿಯೊಬ್ಬನು ತನ್ನ ನೆರೆಯವನೊಡನೆ ಸತ್ಯವನ್ನೇ ಆಡಲಿ. ನ್ಯಾಯಾಲಯಗಳಲ್ಲಿ ನಿಮ್ಮ ತೀರ್ಪು ನ್ಯಾಯಸಮ್ಮತವಾಗಿರಲಿ, ಶಾಂತಿಯ ಸಾಧನ ಆಗಿರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಮಾಡತಕ್ಕ ಕಾರ್ಯಗಳು ಇವೇ: ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಮಾತನಾಡಲಿ. ನಿಮ್ಮ ನ್ಯಾಯಾಲಯಗಳಲ್ಲಿ ಸತ್ಯವೂ ನ್ಯಾಯವೂ ಶಾಂತಿಯ ಸಾಧನವಾಗಿರಲಿ.