Zechariah 8:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮ ನೆರೆಯವನಿಗೆ ಹಾನಿಮಾಡುವುದನ್ನು ಗುಟ್ಟಾಗಿ ಆಲೋಚಿಸಬೇಡಿರಿ. ಸುಳ್ಳು ವಾಗ್ದಾನ ಮಾಡಬೇಡಿರಿ. ಅವುಗಳನ್ನೆಲ್ಲಾ ಮಾಡುವದರಲ್ಲಿ ಆನಂದಿಸಬೇಡಿರಿ. ಯಾಕೆಂದರೆ ಅವುಗಳನ್ನು ನಾನು ದ್ವೇಷಿಸುತ್ತೇನೆ.” ಇದು ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮಲ್ಲಿ ಯಾವನೂ ತನ್ನ ಹೃದಯದಲ್ಲಿ ನೆರೆಯವನಿಗೆ ಕೇಡನ್ನು ಬಗೆಯದಿರಲಿ; ಸುಳ್ಳು ಸಾಕ್ಷಿಗೆ ಎಂದೂ ಸಂತೋಷಪಡಬೇಡಿರಿ; ನಾನು ಇವುಗಳನ್ನೆಲ್ಲಾ ದ್ವೇಷಿಸುವವನಾಗಿದ್ದೇನೆ; ಇದು ಯೆಹೋವನ ನುಡಿ.”
Kannada BSI Bible 2016
ನಿಮ್ಮ ಹೃದಯಗಳಲ್ಲಿ ಒಬ್ಬರ ಮೇಲೊ ಬ್ಬರು ಕೇಡನ್ನು ಕಲ್ಪಿಸದಿರ್ರಿ; ಸುಳ್ಳು ಪ್ರಮಾಣವನ್ನು ಪ್ರೀತಿಮಾಡಿದಿರಿ; ಇವುಗಳೆಲ್ಲವೂ ನಾನು ಹಗೆ ಮಾಡುವಂಥವುಗಳೇ ಎಂದು ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮಲ್ಲಿ ಯಾವನೂ ತನ್ನ ಹೃದಯದಲ್ಲಿ ನೆರೆಯವನಿಗೆ ಕೇಡನ್ನು ಬಗೆಯದಿರಲಿ; ಸುಳ್ಳುಸಾಕ್ಷಿಗೆ ಎಂದೂ ಸಂತೋಷಪಡಬೇಡಿರಿ; ಇವುಗಳನ್ನೆಲ್ಲಾ ದ್ವೇಷಿಸುವವನಾಗಿದ್ದೇನೆ; ಇದು ಯೆಹೋವನ ನುಡಿ.
Kannada Bible (KNCL) BSI 2016
ನಿಮ್ಮಲ್ಲಿ ಯಾರೂ ನೆರೆಯವನಿಗೆ ಕೇಡು ಬಗೆಯದಿರಲಿ. ಸುಳ್ಳುಸಾಕ್ಷ್ಯಕ್ಕೆ ಎಂದೂ ಸಂತೋಷಿಸಬೇಡಿ. ಇದೆಲ್ಲ ನನಗೆ ಅಸಹ್ಯ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಹೃದಯಗಳಲ್ಲಿ ನೆರೆಯವನ ವಿರುದ್ಧವಾಗಿ ಕೇಡನ್ನು ಕಲ್ಪಿಸದಿರಿ. ಸುಳ್ಳು ಪ್ರಮಾಣವನ್ನು ಪ್ರೀತಿಸಬೇಡಿರಿ. ಏಕೆಂದರೆ ಇವುಗಳನ್ನೆಲ್ಲಾ ನಾನು ಹಗೆಮಾಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.