Zechariah 8:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆತನು ಹೇಳುವುದೇನೆಂದರೆ, “ನಾಲ್ಕನೇ, ಐದನೇ, ಏಳನೇ ಮತ್ತು ಹತ್ತನೇ ತಿಂಗಳಿನಲ್ಲಿ ನೀವು ದುಃಖದಿಂದ ಉಪವಾಸ ಮಾಡುವ ವಿಶೇಷ ದಿವಸಗಳಿವೆ. ಆ ದುಃಖದ ದಿವಸಗಳು ನಿಮ್ಮ ಸಂತಸದ ದಿವಸಗಳಾಗಿ ಪರಿಗಣಿಸಬೇಕು. ಮತ್ತು ನೀವು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸುವವರಾಗಬೇಕು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ನಾಲ್ಕನೆಯ ತಿಂಗಳಿನ ಉಪವಾಸ, ಐದನೆಯ ತಿಂಗಳಿನ ಉಪವಾಸ, ಏಳನೆಯ ತಿಂಗಳಿನ ಉಪವಾಸ, ಹತ್ತನೆಯ ತಿಂಗಳಿನ ಉಪವಾಸ ಇವು ಯೆಹೂದ ವಂಶಕ್ಕೆ ವಿಶೇಷವಾದ ಹಬ್ಬಗಳಾಗಿ ಹರ್ಷೋಲ್ಲಾಸಗಳನ್ನು ಉಂಟುಮಾಡುವವು; ಹೀಗಿರಲು ಸತ್ಯವನ್ನೂ, ಸಮಾಧಾನವನ್ನೂ ಪ್ರೀತಿಸಿರಿ.’”
Kannada BSI Bible 2016
ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಾಲ್ಕನೇ ತಿಂಗಳಿನ ಉಪವಾಸವು, ಐದನೆ ಯದು, ಏಳನೆಯದು, ಹತ್ತನೆಯದು, ಯೆಹೂದದ ಮನೆತನದವರಿಗೆ ಸಂತೋಷವೂ ಸಂಭ್ರಮವೂ ಆನಂದವಾದ ಹಬ್ಬಗಳೂ ಆಗುವವು; ಆದರೆ ಸತ್ಯ ವನ್ನೂ ಸಮಾಧಾನವನ್ನೂ ಪ್ರೀತಿಮಾಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಾಲ್ಕನೆಯ ತಿಂಗಳಿನ ಉಪವಾಸ, ಐದನೆಯ ತಿಂಗಳಿನ ಉಪವಾಸ, ಏಳನೆಯ ತಿಂಗಳಿನ ಉಪವಾಸ, ಹತ್ತನೆಯ ತಿಂಗಳಿನ ಉಪವಾಸ, ಇವು ಯೆಹೂದ ವಂಶಕ್ಕೆ ವಿಶೇಷವಾದ ಹಬ್ಬಗಳಾಗಿ ಹರ್ಷೋಲ್ಲಾಸಗಳನ್ನುಂಟುಮಾಡುವವು; ಹೀಗಿರಲು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸಿರಿ.
Kannada Bible (KNCL) BSI 2016
“ನಾಲ್ಕನೇ, ಐದನೇ, ಏಳನೇ ಮತ್ತು ಹತ್ತನೇ ತಿಂಗಳುಗಳ ಉಪವಾಸ ಇವು ಯೆಹೂದ್ಯ ವಂಶಕ್ಕೆ ವಿಶೇಷ ಹಬ್ಬದ ದಿನಗಳಾಗಿ ಮಾರ್ಪಟ್ಟು, ಜನರು ಹರ್ಷಿಸಿ ಆನಂದಿಸುವರು. ಇಂತಿರಲು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸಿರಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಾಲ್ಕನೆಯ, ಐದನೆಯ, ಏಳನೆಯ, ಹತ್ತನೆಯ ತಿಂಗಳಿನ ಉಪವಾಸವು ಯೆಹೂದದ ಮನೆತನದವರಿಗೆ ಸಂತೋಷಕರ, ಸಂಭ್ರಮ ಕಾಲವೂ, ಆನಂದಕರವಾದ ಹಬ್ಬಗಳೂ ಆಗುವುವು. ಆದರೆ ಸತ್ಯವನ್ನೂ, ಸಮಾಧಾನವನ್ನೂ ಪ್ರೀತಿಸಿರಿ.”