Zechariah 8:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಚೀಯೋನ್ ಪರ್ವತವನ್ನು ನಾನು ಸತ್ಯವಾಗಿಯೂ ಪ್ರೀತಿಸುತ್ತೇನೆ. ನನಗೆ ನಂಬಿಗಸ್ತಳಾಗದಿದ್ದಾಗ ನಾನು ಆಕೆಯ ಮೇಲೆ ಕೋಪಗೊಳ್ಳುವಷ್ಟರವರೆಗೆ ಪ್ರೀತಿಸುತ್ತೇನೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, “ಚೀಯೋನಿಗೆ ಅವಮಾನವಾಯಿತಲ್ಲಾ ಎಂದು ಬಹಳವಾಗಿ ಕುದಿಯುತ್ತೇನೆ. ಅತಿರೋಷಗೊಂಡು ಕುದಿಯುತ್ತೇನೆ.”
Kannada BSI Bible 2016
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಚೀಯೋನಿನ ವಿಷಯವಾಗಿ ಅತಿ ರೋಷಗೊಂಡಿದ್ದೆನು; ಅತಿ ಉಗ್ರದಿಂದ ಅದರ ವಿಷಯದಲ್ಲಿ ರೋಷವುಳ್ಳವನಾಗಿದ್ದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಚೀಯೋನಿಗೆ ಅವಮಾನವಾಯಿತಲ್ಲಾ ಎಂದು ಬಹಳವಾಗಿ ಕುದಿಯುತ್ತೇನೆ. ಅತಿರೋಷಗೊಂಡು ಕುದಿಯುತ್ತೇನೆ.
Kannada Bible (KNCL) BSI 2016
“ಸಿಯೋನಿನ ವಿಷಯದಲ್ಲಿ ನನಗೆ ತುಂಬಾ ಅಭಿಮಾನವಿದೆ. ಅದರ ಶತ್ರುಗಳ ವಿಷಯದಲ್ಲಿ ಅಧಿಕ ರೋಷವಿದೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಾನು ಚೀಯೋನಿನ ವಿಷಯವಾಗಿ ಅತಿ ರೋಷಗೊಂಡಿದ್ದೇನೆ. ಅತಿ ಉಗ್ರದಿಂದ ಅವಳ ವಿಷಯದಲ್ಲಿ ರೋಷವುಳ್ಳವನಾಗಿದ್ದೇನೆ.”