Zechariah 8:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೇರೆಬೇರೆ ನಗರದ ಜನರು ಪರಸ್ಪರ ವಂದಿಸುವರು. ಅವರಲ್ಲಿ ಕೆಲವರು, ‘ನಾವು ಸರ್ವಶಕ್ತನಾದ ಯೆಹೋವನನ್ನು ಆರಾಧಿಸಲು ಹೋಗುತ್ತಿದ್ದೇವೆ’ ಅನ್ನುವರು. ಅದಕ್ಕೆ ಇನ್ನೊಬ್ಬನು, “ನಾನು ನಿಮ್ಮೊಂದಿಗೆ ಬರುತ್ತೇನೆ’” ಅನ್ನುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂದು ಊರಿನವರು ಇನ್ನೊಂದು ಊರಿಗೆ ಹೋಗಿ, ‘ಯೆಹೋವನ ಪ್ರಸನ್ನತೆಯನ್ನು ಬೇಡುವುದಕ್ಕೂ, ಸೇನಾಧೀಶ್ವರ ಯೆಹೋವನನ್ನು ಆಶ್ರಯಿಸುವುದಕ್ಕೂ ಹೋಗೋಣ ಬನ್ನಿರಿ, ನಾವೂ ಹೋಗುತ್ತೇವೆ’ ಎಂದು ಹೇಳುವರು.
Kannada BSI Bible 2016
ಒಂದರ ನಿವಾಸಿಗಳು ಮತ್ತೊಂದಕ್ಕೆ ಹೋಗಿ--ನಾವು ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಸೈನ್ಯಗಳ ಕರ್ತನನ್ನು ಹುಡುಕುವದಕ್ಕೂ ಬೇಗ ಹೋಗೋಣ; ನಾನು ಕೂಡ ಹೋಗುತ್ತೇನೆ ಎಂದು ಹೇಳುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದು ಊರಿನವರು ಇನ್ನೊಂದೂರಿಗೆ ಹೋಗಿ - ಯೆಹೋವನ ಪ್ರಸನ್ನತೆಯನ್ನು ಬೇಡುವದಕ್ಕೂ ಸೇನಾಧೀಶ್ವರ ಯೆಹೋವನನ್ನು ಆಶ್ರಯಿಸುವದಕ್ಕೂ ಹೋಗೋಣ ಬನ್ನಿರಿ, ನಾವೂ ಹೋಗುತ್ತೇವೆ ಎಂದು ಹೇಳುವರು.
Kannada Bible (KNCL) BSI 2016
‘ಸೇನಾಧೀಶ್ವರ ಸರ್ವೇಶ್ವರಸ್ವಾಮಿಯನ್ನು ಆರಾಧಿಸಲು, ಅವರ ಆಶೀರ್ವಾದವನ್ನು ಬೇಡಲು ದೇವಾಲಯಕ್ಕೆ ಹೋಗುತ್ತಿದ್ದೇವೆ. ನಮ್ಮೊಡನೆ ಬನ್ನಿ, ಹೋಗೋಣ’ ಎಂದು ಒಂದು ಊರಿನವರು ಮತ್ತೊಂದೂರಿನವರಿಗೆ ಹೇಳುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ಪಟ್ಟಣದ ನಿವಾಸಿಗಳು ಮತ್ತೊಂದಕ್ಕೆ ಹೋಗಿ, ‘ನಾವು ಯೆಹೋವ ದೇವರ ಮುಂದೆ ಬೇಡಿಕೊಳ್ಳುವುದಕ್ಕೂ, ಸೇನಾಧೀಶ್ವರ ಯೆಹೋವ ದೇವರನ್ನು ಹುಡುಕುವುದಕ್ಕೂ ಬೇಗ ಹೋಗೋಣ. ನಾನು ಕೂಡ ಹೋಗುತ್ತೇನೆ,’ ಎಂದು ಹೇಳುವರು.