Zechariah 8:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ಆ ಸಮಯದಲ್ಲಿ ಬೇರೆಬೇರೆ ಭಾಷೆಗಳನ್ನು ಮಾತಾಡುವ ಅನೇಕ ವಿದೇಶಿಯರು ಯೆಹೂದ್ಯನೊಬ್ಬನ ಬಳಿಗೆ ಬಂದು, ಅವನ ಬಟ್ಟೆಯ ಅಂಚನ್ನು ಹಿಡಿದು, “ದೇವರು ನಿಮ್ಮೊಂದಿಗಿದ್ದಾನೆಂದು ನಾವು ಕೇಳಿದ್ದೇವೆ. ನಿಮ್ಮೊಂದಿಗೆ ನಾವೂ ಬಂದು ಆತನನ್ನು ಆರಾಧಿಸಬಹುದೋ?” ಎಂದು ಕೇಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ಕಾಲದಲ್ಲಿ ಜನಾಂಗಗಳ ವಿವಿಧ ಭಾಷೆಗಳವರಾದ ಹತ್ತು ಜನರು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು, ‘ನಾವು ನಿಮ್ಮೊಂದಿಗೆ ಬರುವೆವು, ಏಕೆಂದರೆ ದೇವರು ನಿಮ್ಮ ಸಂಗಡ ಇದ್ದಾನೆಂಬ ಸುದ್ದಿಯು ನಮ್ಮ ಕಿವಿಗೆ ಬಿದ್ದಿದೆ’” ಎಂದು ಹೇಳುವರು.
Kannada BSI Bible 2016
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಆ ಕಾಲದಲ್ಲಿ ಜನಾಂಗಗಳ ವಿವಿಧಭಾಷೆಗಳವರಾದ ಹತ್ತು ಜನರು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು - ನಾವು ನಿಮ್ಮೊಂದಿಗೆ ಬರುವೆವು, ದೇವರು ನಿಮ್ಮ ಸಂಗಡ ಇದ್ದಾನೆಂಬ ಸುದ್ದಿಯು ನಮ್ಮ ಕಿವಿಗೆ ಬಿದ್ದಿದೆ ಎಂದು ಹೇಳುವರು.
Kannada Bible (KNCL) BSI 2016
ಆ ದಿನದಲ್ಲಿ ವಿವಿಧ ಭಾಷೆಗಳನ್ನಾಡುವ ರಾಷ್ಟ್ರಗಳಿಂದ ಹತ್ತು ಹತ್ತು ಮಂದಿ ಬಂದು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು, ‘ನಾವೂ ನಿಮ್ಮೊಂದಿಗೆ ಬರುತ್ತೇವೆ. ಏಕೆಂದರೆ ದೇವರು ನಿಮ್ಮೊಡನೆ ಇದ್ದಾರೆ ಎಂಬ ಸುದ್ದಿಯನ್ನು ಕೇಳಿದ್ದೇವೆ’ ಎಂದು ಹೇಳುವರು. ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಆ ದಿವಸಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು, ನಾವು ನಿಮ್ಮ ಸಂಗಡ ಬರುತ್ತೇವೆ, ಏಕೆಂದರೆ ನಿಮ್ಮ ಸಂಗಡ ದೇವರು ಇದ್ದಾರೆಂದು ಕೇಳಿದ್ದೇವೆ,” ಎಂದು ಹೇಳುವರು.