Zechariah 8:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಹೇಳುವುದೇನೆಂದರೆ, “ನಾನು ಚೀಯೋನಿಗೆ ಹಿಂದಿರುಗಿ ಬಂದಿದ್ದೇನೆ. ನಾನು ಜೆರುಸಲೇಮಿನಲ್ಲಿ ವಾಸಿಸುತ್ತೇನೆ. ಜೆರುಸಲೇಮ್ ನಂಬಿಗಸ್ತನಗರವೆಂದು ಕರೆಯಲ್ಪಡುವುದು. ಸರ್ವಶಕ್ತನ ಪರ್ವತವು ಪವಿತ್ರ ಪರ್ವತವೆಂದು ಕರೆಯಲ್ಪಡುವುದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಇಂತೆನ್ನುತ್ತಾನೆ, “ನಾನು ಚೀಯೋನಿಗೆ ಹಿಂದಿರುಗಿದ್ದೇನೆ, ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವೆನು; ಆಗ ಯೆರೂಸಲೇಮ್ ಸತ್ಯದ ಪಟ್ಟಣವೆಂದು ಅನ್ನಿಸಿಕೊಳ್ಳುವುದು, ಸೇನಾಧೀಶ್ವರ ಯೆಹೋವನ ಪರ್ವತಕ್ಕೆ ಪರಿಶುದ್ಧ ಪರ್ವತವೆಂಬ ಹೆಸರು ಬರುವುದು.”
Kannada BSI Bible 2016
ಕರ್ತನು ಹೀಗೆ ಹೇಳುತ್ತಾನೆ--ಚೀಯೋನಿಗೆ ನಾನು ತಿರಿಗಿ ಕೊಂಡಿದ್ದೇನೆ; ಯೆರೂಸಲೇಮಿನ ಮಧ್ಯದಲ್ಲಿ ವಾಸಿಸು ವೆನು; ಯೆರೂಸಲೇಮು ಸತ್ಯದ ಪಟ್ಟಣವೆಂದೂ ಸೈನ್ಯಗಳ ಕರ್ತನ ಪರ್ವತವು ಪರಿಶುದ್ಧ ಪರ್ವತ ವೆಂದೂ ಕರೆಯಲ್ಪಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಇಂತೆನ್ನುತ್ತಾನೆ - ನಾನು ಚೀಯೋನಿಗೆ ಹಿಂದಿರುಗಿದ್ದೇನೆ, ಯೆರೂಸಲೇವಿುನ ಮಧ್ಯದಲ್ಲಿ ವಾಸಿಸುವೆನು; ಆಗ ಯೆರೂಸಲೇಮು ಸುವ್ರತನಗರಿ ಅನ್ನಿಸಿಕೊಳ್ಳುವದು, ಸೇನಾಧೀಶ್ವರ ಯೆಹೋವನ ಪರ್ವತಕ್ಕೆ ಪರಿಶುದ್ಧ ಪರ್ವತವೆಂಬ ಹೆಸರು ಬರುವದು.
Kannada Bible (KNCL) BSI 2016
ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನಿಗೆ ಹಿಂದಿರುಗುವೆನು. ಜೆರುಸಲೇಮಿನ ನಡುವೆ ವಾಸಮಾಡುವೆನು. ಆಗ ಜೆರುಸಲೇಮ್ ‘ನಿಷ್ಠಾವಂತ ನಗರ’ ಎನಿಸಿಕೊಳ್ಳುವುದು. ಅದಕ್ಕೆ ಸೇನಾಧೀಶ್ವರನ ಪರ್ವತ, ಪವಿತ್ರ ಪರ್ವತ ಎಂಬ ಹೆಸರು ಬರುವುದು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಹೀಗೆ ಹೇಳುತ್ತಾರೆ: “ಚೀಯೋನಿಗೆ ನಾನು ತಿರುಗಿಕೊಂಡು, ನಾನು ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವೆನು. ಆಗ ಯೆರೂಸಲೇಮು ಸತ್ಯದ ಪಟ್ಟಣವೆಂದೂ ಸೇನಾಧೀಶ್ವರ ಯೆಹೋವ ದೇವರ ಪರ್ವತವು ಪರಿಶುದ್ಧ ಪರ್ವತವೆಂದೂ ಕರೆಯಿಸಿಕೊಳ್ಳುವುದು.”