Zechariah 8:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಳಿದುಳಿದುವರು ‘ಇದು ಆಶ್ಚರ್ಯಕರ’ ಎಂದು ಹೇಳುವರು. ನಾನೂ ಇದು ಆಶ್ಚರ್ಯಕರವೆಂದು ತಿಳಿಯುತ್ತೇನೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ಕಾಲದ ಸ್ಥಿತಿಯು ಈ ಜನಶೇಷದವರ ದೃಷ್ಟಿಗೆ ಅತ್ಯಾಶ್ಚರ್ಯವಾದರೂ ನನ್ನ ದೃಷ್ಟಿಗೆ ಅತ್ಯಾಶ್ಚರ್ಯವೋ?” ಇದು ಸೇನಾಧೀಶ್ವರ ಯೆಹೋವನ ನುಡಿ.
Kannada BSI Bible 2016
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇದು ಈ ದಿವಸಗಳಲ್ಲಿ ಉಳಿದ ಈ ಜನರ ಕಣ್ಣುಗಳಿಗೆ ಆಶ್ಚರ್ಯವಾಗಿ ತೋರಿ ದರೂ ಅದು ನನ್ನ ಕಣ್ಣುಗಳಿಗೂ ಸಹ ಆಶ್ಚರ್ಯವಾಗಿ ತೋರುವದೋ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಆ ಕಾಲದ ಸ್ಥಿತಿಯು ಈ ಜನಶೇಷದವರ ದೃಷ್ಟಿಗೆ ಅತ್ಯಾಶ್ಚರ್ಯವಾದರೂ ನನ್ನ ದೃಷ್ಟಿಗೆ ಅತ್ಯಾಶ್ಚರ್ಯವೋ? ಇದು ಸೇನಾಧೀಶ್ವರ ಯೆಹೋವನ ನುಡಿ.
Kannada Bible (KNCL) BSI 2016
ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ಅಳಿದುಳಿದಿರುವ ಜನರಿಗೆ ಇಂಥ ಪರಿಸ್ಥಿತಿ ಅತಿಶಯವಾಗಿ ಕಾಣಬಹುದು. ಆದರೆ ನನಗೆ ಅದೇನೂ ಅತಿಶಯವಲ್ಲ.” ಇದು ಸರ್ವೇಶ್ವರನ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಇದು ಈ ದಿವಸಗಳಲ್ಲಿ ಉಳಿದ ಈ ಜನರ ದೃಷ್ಟಿಗೆ ಆಶ್ಚರ್ಯವಾಗಿ ತೋರಿದರೂ, ನನ್ನ ಕಣ್ಣುಗಳಿಗೆ ಸಹ ಆಶ್ಚರ್ಯವಾಗಿ ತೋರುವುದೋ?” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.