Zechariah 8:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನಾನೂ ಪೂರ್ವ ಪಶ್ಚಿಮದಲ್ಲಿರುವ ದೇಶಗಳೊಳಗಿಂದ ನನ್ನ ಜನರನ್ನು ರಕ್ಷಿಸುವುದನ್ನು ನೋಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ನನ್ನ ಜನರನ್ನು ಪೂರ್ವದಿಕ್ಕಿನ ದೇಶದಿಂದಲೂ, ಪಶ್ಚಿಮದಿಕ್ಕಿನ ದೇಶದಿಂದಲೂ ಪಾರುಮಾಡಿ ಬರಗೊಳಿಸುವೆನು,
Kannada BSI Bible 2016
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನನ್ನ ಜನರನ್ನು ಪೂರ್ವ ದಿಕ್ಕಿನ ದೇಶದಿಂದಲೂ ಪಶ್ಚಿಮ ದಿಕ್ಕಿನ ದೇಶದಿಂದಲೂ ರಕ್ಷಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ನನ್ನ ಜನರನ್ನು ಮೂಡಣ ದೇಶದಿಂದಲೂ ಪಡುವಣ ದೇಶದಿಂದಲೂ ಪಾರುಮಾಡಿ ಬರಗೊಳಿಸುವೆನು,
Kannada Bible (KNCL) BSI 2016
ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಇಗೋ, ನಾನು ನನ್ನ ಜನರನ್ನು ಪೂರ್ವಪಶ್ಚಿಮ ನಾಡುಗಳಿಂದ ಬಿಡುಗಡೆಮಾಡಿ, ಇಲ್ಲಿಗೆ ಬರಮಾಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಾನು ನನ್ನ ಜನರನ್ನು ಪೂರ್ವದಿಕ್ಕಿನ ದೇಶದಿಂದಲೂ, ಪಶ್ಚಿಮ ದೇಶದಿಂದಲೂ ರಕ್ಷಿಸುವೆನು.