Zechariah 8:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಬಲಗೊಳ್ಳಿರಿ! ಸರ್ವಶಕ್ತನಾದ ಯೆಹೋವನು ತನ್ನ ಆಲಯವನ್ನು ತಿರುಗಿ ಕಟ್ಟಲು ಅಸ್ತಿವಾರವನ್ನು ಹಾಕುವಾಗ ಪ್ರವಾದಿಗಳು ಕೊಟ್ಟ ಸಂದೇಶವನ್ನೇ ನೀವು ತಿರುಗಿ ಕೇಳುತ್ತಿದ್ದೀರಿ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ದೇವಾಲಯವನ್ನು ಕಟ್ಟುವ ಉದ್ದೇಶದಿಂದ ಸೇನಾಧೀಶ್ವರ ಯೆಹೋವನ ಆ ಮಂದಿರದ ಅಸ್ತಿವಾರವನ್ನು ಹಾಕಿದ ಕಾಲದಲ್ಲಿಯೂ ಇದ್ದ ಪ್ರವಾದಿಗಳ ಬಾಯಿಂದ ಈ ಮಾತುಗಳನ್ನು ಈಗ ಕೇಳುವವರೇ, ನಿಮ್ಮ ಕೈಗಳು ಬಲಗೊಳ್ಳಲಿ!
Kannada BSI Bible 2016
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ದೇವಾಲಯವನ್ನು ಕಟ್ಟುವ ಹಾಗೆ ಸೈನ್ಯಗಳ ಕರ್ತನ ಆಲಯದ ಅಸ್ತಿವಾರವು ಹಾಕಲ್ಪಟ್ಟ ದಿವಸದಲ್ಲಿದ್ದ ಪ್ರವಾದಿಗಳ ಬಾಯಿಂದಾದ ಈ ವಾಕ್ಯಗಳನ್ನು ಈ ದಿವಸಗಳಲ್ಲಿ ಕೇಳುವವರೇ, ನಿಮ್ಮ ಕೈಗಳು ಬಲವಾಗಿರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ದೇವಾಲಯವನ್ನು ಕಟ್ಟುವ ಉದ್ದೇಶದಿಂದ ಸೇನಾಧೀಶ್ವರ ಯೆಹೋವನ ಆ ಮಂದಿರದ ಅಸ್ತಿವಾರವನ್ನು ಹಾಕಿದ ಕಾಲದಲ್ಲಿಯೂ ಇದ್ದ ಪ್ರವಾದಿಗಳ ಬಾಯಿಂದ ಈ ಮಾತುಗಳನ್ನು ಈಗ ಕೇಳುವವರೇ, ನಿಮ್ಮ ಕೈಗಳು ಬಲಗೊಳ್ಳಲಿ!
Kannada Bible (KNCL) BSI 2016
ಸೇನಾಧೀಶ್ವರ ಸರ್ವೇಶ್ವರ ಹೀಗೆಂದಿದ್ದಾರೆ: “ನಿಮ್ಮ ಕೈ ಮುಂದಾಗಲಿ. ಈಗ ನೀವು ಕೇಳುತ್ತಿರುವ ಮಾತುಗಳು ಮಹಾದೇವಾಲಯಕ್ಕೆ ಅಸ್ತಿಭಾರವನ್ನು ಹಾಕಿದ ಕಾಲದಲ್ಲಿ ಪ್ರವಾದಿಗಳು ಆಡಿದ ಮಾತುಗಳೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ದೇವಾಲಯವನ್ನು ಕಟ್ಟುವ ಹಾಗೆ ಸೇನಾಧೀಶ್ವರ ಯೆಹೋವ ದೇವರ ಆಲಯದ ಅಸ್ತಿವಾರವು ಹಾಕಲಾದ ದಿವಸದಲ್ಲಿದ್ದ ಪ್ರವಾದಿಗಳ ಬಾಯಿಂದಾದ ಈ ವಾಕ್ಯಗಳನ್ನು ಈ ದಿವಸಗಳಲ್ಲಿ ಕೇಳುವವರೇ, ನಿಮ್ಮ ಕೈಗಳು ಬಲವಾಗಿರಲಿ.