Zechariah 9:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೆರೆಹಿಡಿಯಲ್ಪಟ್ಟವರೇ, ಮನೆಗೆ ಹೋಗಿ. ಈಗ ನಿಮಗೊಂದು ನಿರೀಕ್ಷೆಯಿದೆ. ನಾನು ನಿಮಗೆ ಖಂಡಿತವಾಗಿ ಹೇಳುವುದೇನೆಂದರೆ, ನಾನು ತಿರುಗಿ ಬರುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿರೀಕ್ಷೆ ಹೊಂದಿದ ಸೆರೆಯವರೇ, ನಿಮ್ಮ ದುರ್ಗಕ್ಕೆ ಹಿಂದಿರುಗಿರಿ; ನಿಮಗೆ ಎರಡರಷ್ಟು ಸುಖವನ್ನು ದಯಪಾಲಿಸುವೆನೆಂದು ಈಗಲೂ ಪ್ರಕಟಿಸುತ್ತೇನೆ.
Kannada BSI Bible 2016
ನಿರೀಕ್ಷೆಯ ಸೆರೆಯವರೇ, ಬಲವಾದ ದುರ್ಗಸ್ಥಾನಕ್ಕೆ ತಿರಿಗಿರಿ, ಎರಡ ರಷ್ಟು ನಿಮಗೆ ಕೊಡುವೆನೆಂದು ಈ ಹೊತ್ತೇ ಪ್ರಕಟಿ ಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸುನಿರೀಕ್ಷೆಯುಂಟಾದ ಸೆರೆಯವರೇ, ನಿಮ್ಮ ದುರ್ಗಕ್ಕೆ ಹಿಂದಿರುಗಿರಿ; ನಿಮಗೆ ಎರಡರಷ್ಟು [ಸುಖವನ್ನು] ದಯಪಾಲಿಸುವೆನು ಎಂದು ಈಗಲೂ ಪ್ರಕಟಿಸುತ್ತೇನೆ.
Kannada Bible (KNCL) BSI 2016
ನಂಬಿಕೆಯಿಂದ ಕಾದಿರುವ ಸೆರೆಯಾಳುಗಳೇ, ಹಿಂದಿರುಗಿರಿ ನಿಮ್ಮ ಸುಭದ್ರ ದುರ್ಗಸ್ಥಾನಕೆ ಇಗೋ, ಈಗಲೂ ಘೋಷಿಸುತ್ತಿರುವೆ: ನಿಮಗಿಮ್ಮಡಿ ಸೌಭಾಗ್ಯ ನೀಡುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿರೀಕ್ಷೆಯ ಸೆರೆಯವರೇ, ಬಲವಾದ ದುರ್ಗಸ್ಥಾನಕ್ಕೆ ತಿರುಗಿರಿ. ಎರಡರಷ್ಟು ಕೊಡುವೆನೆಂದು ನಿನಗೆ ಈ ಹೊತ್ತೇ ಪ್ರಕಟಿಸುತ್ತೇನೆ.