Zechariah 9:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸರ್ವಶಕ್ತನಾದ ದೇವರು ಅವರನ್ನು ಕಾಪಾಡುವನು. ಸೈನಿಕರು ಶತ್ರುವನ್ನು ಜಯಿಸಲು ಕವಣೆ ಮತ್ತು ಕಲ್ಲುಗಳನ್ನು ಉಪಯೋಗಿಸುವರು. ಶತ್ರುಗಳ ರಕ್ತವನ್ನು ಚೆಲ್ಲುವರು. ಅದು ದ್ರಾಕ್ಷಾರಸದಂತೆ ಹರಿಯುವದು. ಅದು ಯಜ್ಞವೇದಿಕೆಯ ಮೂಲೆಗಳಲ್ಲಿ ರಕ್ತವನ್ನು ಹೊಯಿದಂತೆ ಕಾಣುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೇನಾಧೀಶ್ವರನಾದ ಯೆಹೋವನು ತನ್ನ ಜನರನ್ನು ಕಾಪಾಡುವನು; ಅವರು ಶತ್ರುಗಳನ್ನು ನುಂಗಿಬಿಡುವರು, ಕವಣೆಯ ಕಲ್ಲುಗಳನ್ನು ತುಳಿದುಹಾಕುವರು; ರಕ್ತವನ್ನು ಕುಡಿದು ಅಮಲೇರಿದವರಾಗಿ ಭೋರ್ಗರೆಯುವರು; ಬೋಗುಣಿಗಳಂತೆಯೂ, ಯಜ್ಞವೇದಿಯ ಮೂಲೆಗಳಂತೆ ರಕ್ತಪೂರ್ಣರಾಗಿರುವರು.
Kannada BSI Bible 2016
ಸೈನ್ಯಗಳ ಕರ್ತನು ಅವರನ್ನು ಕಾಪಾಡುವನು; ಅವರು ನುಂಗಿ ಕವಣೆ ಕಲ್ಲುಗಳನ್ನು ಸ್ವಾಧೀನಮಾಡಿ ಕೊಳ್ಳುವರು; ಕುಡಿದು ದ್ರಾಕ್ಷಾರಸದಿಂದಾದ ಹಾಗೆ ಓಲಾಡುವರು, ಪಾತ್ರೆಯ ಹಾಗೆಯೂ ಬಲಿಪೀಠದ ಮೂಲೆಗಳ ಹಾಗೆಯೂ ತುಂಬಿರುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇನಾಧೀಶ್ವರ ಯೆಹೋವನು ತನ್ನ ಜನರನ್ನು ಕಾಪಾಡುವನು; ಅವರು [ಶತ್ರುಗಳನ್ನು] ನುಂಗಿಬಿಡುವರು, ಕವಣೆಯ ಕಲ್ಲುಗಳನ್ನು ತುಳಿದುಹಾಕುವರು; [ರಕ್ತವನ್ನು] ಕುಡಿದು ಅಮಲೇರಿದವರಾಗಿ ಭೋರ್ಗರೆಯುವರು; ಬೋಗುಣಿಗಳಂತೆಯೂ ಯಜ್ಞವೇದಿಯ ಮೂಲೆಗಳ ಹಾಗೂ ರಕ್ತಪೂರ್ಣರಾಗಿರುವರು.
Kannada Bible (KNCL) BSI 2016
ರಕ್ಷಿಸುವನು ಸೇನಾಧೀಶ್ವರ ಸರ್ವೇಶ್ವರ ತನ್ನ ಜನರನು ನಸುಕಿ ನಾಶಮಾಡುವರವರು ಕವಣೆಗಾರ ಶತ್ರುಗಳನು. ಭೋರ್ಗರೆಯುವರು ಕುಡಿದು ಅಮಲೇರಿದವರಂತೆ ಇರುವರು ತುಂಬಿ ತುಳುಕುವ ಬೋಗುಣಿಗಳಂತೆ ರಕ್ತತೋಯ್ದ ವೇದಿಯ ಮೂಲೆಮೂಲೆಗಳಂತೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೇನಾಧೀಶ್ವರ ಯೆಹೋವ ದೇವರು ಅವರನ್ನು ಕಾಪಾಡುವರು. ಅವರು ನಾಶಮಾಡಿ, ಕವಣೆ ಕಲ್ಲುಗಳನ್ನು ಸ್ವಾಧೀನಮಾಡಿಕೊಳ್ಳುವರು. ಕುಡಿದು, ದ್ರಾಕ್ಷಾರಸದಿಂದಾದ ಹಾಗೆ ತೂಗಾಡುವರು. ಅವರು ಬಲಿಪೀಠದ ಮೂಲೆಗಳಿಗೆ ಚಿಮುಕಿಸಲು ಬಳಸುವ ಪಾತ್ರೆಯ ಹಾಗೆಯೂ ತುಂಬಿರುವರು.