Zechariah 9:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸಮಯಗಳಲ್ಲಿ ದೇವರಾದ ಯೆಹೋವನು, ಕುರುಬನು ತನ್ನ ಕುರಿಗಳನ್ನು ಸಂರಕ್ಷಿಸುವ ರೀತಿಯಲ್ಲಿ ತನ್ನ ಜನರನ್ನು ರಕ್ಷಿಸುವನು. ಅವರು ಆತನಿಗೆ ಅಮೂಲ್ಯರಾಗಿರುವರು. ಆತನ ಕೈಯಲ್ಲಿ ಹೊಳೆಯುವ ಆಭರಣದಂತಿರುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನದಲ್ಲಿ ಅವರ ದೇವರಾದ ಯೆಹೋವನು ಅವರನ್ನು ತನ್ನ ಹಿಂಡಾಗಿರುವ ಜನರೆಂದು ರಕ್ಷಿಸುವನು; ಅವರು ಕಿರೀಟದಲ್ಲಿನ ರತ್ನಗಳಂತೆ ತಮ್ಮ ದೇಶದಲ್ಲಿ ಥಳಥಳಿಸುವರು.
Kannada BSI Bible 2016
ಇದಲ್ಲದೆ ಅವರ ದೇವರಾದ ಕರ್ತನು ಆ ದಿವಸದಲ್ಲಿ ಅವರನ್ನು ತನ್ನ ಜನರ ಮಂದೆಯ ಹಾಗೆ ರಕ್ಷಿಸುವನು; ಅವರು ಕಿರೀಟದ ಕಲ್ಲುಗಳಂತೆ ಆತನ ದೇಶದ ಮೇಲೆ ಧ್ವಜವಾಗಿ ಎತ್ತಲ್ಪಡುವರು.ಆತನ ಒಳ್ಳೇತನವು ಎಷ್ಟೋ ದೊಡ್ಡದು; ಆತನ ಸೌಂದರ್ಯವು ಎಷ್ಟು ಮಹತ್ತಾ ದದ್ದು! ಧಾನ್ಯವು ಯೌವನಸ್ಥರನ್ನೂ ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿನದಲ್ಲಿ ಅವರ ದೇವರಾದ ಯೆಹೋವನು ಅವರನ್ನು ತನ್ನ ಹಿಂಡಾಗಿರುವ ಜನರೆಂದು ರಕ್ಷಿಸುವನು; ಅವರು ಕಿರೀಟದಲ್ಲಿನ ರತ್ನಗಳಂತೆ ತಮ್ಮ ದೇಶದಲ್ಲಿ ಥಳಥಳಿಸುವರು.
Kannada Bible (KNCL) BSI 2016
ಸ್ವಜನರನು ದೇವ ಸರ್ವೇಶ್ವರ ಕಾಪಾಡುವನು ಮೇಷಪಾಲನಂತೆ ನಾಡಿನೊಳು ಥಳಥಳಿಸುವರವರು ಕಿರೀಟದ ರತ್ನಗಳಂತೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ದೇವರಾದ ಯೆಹೋವ ದೇವರು ಆ ದಿವಸದಲ್ಲಿ, ಅವರನ್ನು ತನ್ನ ಜನರ ಮಂದೆಯ ಹಾಗೆ ರಕ್ಷಿಸುವನು, ಅವರು ಕಿರೀಟದ ರತ್ನಗಳಂತೆ ಆತನ ದೇಶದಲ್ಲಿ ಹೊಳೆಯುವರು.