Zechariah 9:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನಮ್ಮ ಒಡೆಯನಾದ ಯೆಹೋವನು ಅದೆಲ್ಲವನ್ನು ತೆಗೆದುಕೊಳ್ಳುವನು. ಆಕೆಯ ನೌಕಾಬಲವನ್ನು ಮುರಿದುಬಿಡುವನು. ಮತ್ತು ಆ ನಗರವು ಬೆಂಕಿಯಿಂದ ನಾಶವಾಗುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾ, ಕರ್ತನು ಅದರ ಆಸ್ತಿಯನ್ನು ಆಕ್ರಮಿಸಿ ಪೌಳಿಗೋಡೆಯನ್ನು ಸಮುದ್ರದೊಳಗೆ ಹೊಡೆದುಹಾಕುವನು; ಪಟ್ಟಣವು ಬೆಂಕಿಗೆ ತುತ್ತಾಗುವುದು.
Kannada BSI Bible 2016
ಇಗೋ, ಕರ್ತನು ಅದನ್ನು ಹೊರಗೆ ಹಾಕುವನು; ಸಮುದ್ರದಲ್ಲಿ ಅದರ ಬಲವನ್ನು ಹೊಡೆಯುವನು; ಅದು ಬೆಂಕಿ ಯಿಂದ ದಹಿಸಲ್ಪಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, ಕರ್ತನು ಅದರ ಆಸ್ತಿಯನ್ನು ಆಕ್ರವಿುಸಿ ಪೌಳಿಗೋಡೆಯನ್ನು ಸಮುದ್ರದೊಳಕ್ಕೆ ಹೊಡೆದು ಹಾಕುವನು; ಪಟ್ಟಣವು ಬೆಂಕಿಗೆ ತುತ್ತಾಗುವದು.
Kannada Bible (KNCL) BSI 2016
ಆದರೆ ಸರ್ವೇಶ್ವರ ಅದರ ಆಸ್ತಿಪಾಸ್ತಿಯನ್ನು ಕಿತ್ತುಕೊಂಡು ಅದೆಲ್ಲವನ್ನು ಸಮುದ್ರದಲ್ಲಿ ಎಸೆದುಬಿಡುವರು. ಆ ಪಟ್ಟಣವು ಬೆಂಕಿಗೆ ಆಹುತಿಯಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಅದರ ಆಸ್ತಿಪಾಸ್ತಿಯನ್ನು ಕಿತ್ತುಹಾಕುವರು. ಅದೆಲ್ಲವನ್ನು ಸಮುದ್ರದಲ್ಲಿ ಎಸೆದುಬಿಡುವರು. ಅದು ಬೆಂಕಿಯಿಂದ ದಹಿಸಿಬಿಡುವುದು.