Zechariah 9:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಅಷ್ಕೆಲೋನಿನ ಜನರು ಇದನ್ನು ನೋಡಿ ಭಯಗ್ರಸ್ತರಾಗುವರು. ಗಾಜದ ಜನರು ಭಯದಿಂದ ನಡುಗುವರು. ಮತ್ತು ಎಕ್ರೋನಿನ ಜನರು ಇದನ್ನೆಲ್ಲಾ ನೋಡಿ ನಿರೀಕ್ಷೆ ಇಲ್ಲದವರಾಗಿರುವರು. ಗಾಜದಲ್ಲಿ ಯಾವ ಅರಸನೂ ಉಳಿಯನು. ಅಷ್ಕೆಲೋನಿನಲ್ಲಿ ಯಾರೂ ವಾಸಿಸರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಷ್ಕೆಲೋನು ಇದನ್ನು ನೋಡಿ ಹೆದರುವುದು; ಗಾಜವು ಸಹ ಅತಿ ಸಂಕಟಪಡುವುದು; ಎಕ್ರೋನು ನಿರೀಕ್ಷೆಗೆಟ್ಟು ಬಹು ವ್ಯಥೆಗೆ ಒಳಗಾಗುವುದು; ಗಾಜಕ್ಕೆ ರಾಜನೇ ಇಲ್ಲವಾಗುವನು; ಅಷ್ಕೆಲೋನು ನಿರ್ಜನವಾಗುವುದು;
Kannada BSI Bible 2016
ಅಷ್ಕಲೋನು ನೋಡಿ ಭಯಪಡುವದು; ಗಾಜ ಸಹ ಅದನ್ನು ನೋಡಿ ಬಹಳವಾಗಿ ವೇದನೆಪಡುವದು, ಎಕ್ರೋನು ಸಹ; ಅದರ ನಿರೀಕ್ಷೆಯು ಅದನ್ನು ನಾಚಿಕೆ ಪಡಿಸಿತು; ಗಾಜ ದೊಳಗಿಂದ ಅರಸನು ನಾಶವಾಗುವನು; ಅಷ್ಕೆಲೋನು ನಿವಾಸವಿಲ್ಲದೆ ಇರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಷ್ಕೆಲೋನು ಇದನ್ನು ನೋಡಿ ಹೆದರುವದು; ಗಾಜವು ಸಹ ಅತಿಸಂಕಟಪಡುವದು; ಎಕ್ರೋನು ನಿರೀಕ್ಷೆಗೆಟ್ಟು ಬಹು ವ್ಯಥೆಗೆ ಒಳಗಾಗುವದು; ಗಾಜಕ್ಕೆ ರಾಜನೇ ಇಲ್ಲವಾಗುವನು; ಅಷ್ಕೆಲೋನು ನಿರ್ಜನವಾಗುವದು;
Kannada Bible (KNCL) BSI 2016
ಇದನ್ನು ಕಂಡು ಅಷ್ಕೆಲೋನ್ ಭಯದಿಂದ ನಡುಗುವುದು. ಗಾಜಾ ಪಟ್ಟಣ ಸಂಕಟದಿಂದ ಗೋಳಾಡುವುದು; ಎಕ್ರೋನ್ ನಿರಾಶೆಯಿಂದ ಪ್ರಲಾಪಿಸುವುದು; ಗಾಜಾ ಪಟ್ಟಣಕ್ಕೆ ರಾಜನೇ ಇಲ್ಲದಂತಾಗುವುದು. ಅಷ್ಕೆಲೋನ್ ನಿರ್ಜನ ಪ್ರದೇಶವಾಗುವುದು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಷ್ಕೆಲೋನು ಕಂಡು ಭಯಪಡುವುದು, ಗಾಜವು ಸಹ ಅದನ್ನು ಕಂಡು ವೇದನೆ ಪಡುವುದು. ಎಕ್ರೋನಿಗೂ ಸಹ ಹೀಗೆ ಆಗುವುದು. ಏಕೆಂದರೆ ಅವಳ ನಿರೀಕ್ಷೆಯು ಬಾಡುವುದು. ಗಾಜದೊಳಗಿಂದ ಅರಸನು ನಾಶವಾಗುವನು. ಅಷ್ಕೆಲೋನು ನಿವಾಸ ಇಲ್ಲದೆ ಇರುವುದು.