Zephaniah 1:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆ ಸಮಯಗಳಲ್ಲಿ ನಾನು ದೀಪವನ್ನು ಹಚ್ಚಿ ಜೆರುಸಲೇಮಿನಲ್ಲಿ ಹುಡುಕಾಡುವೆನು. ತಮ್ಮ ಸ್ವಂತ ರೀತಿಯಲ್ಲಿ ನಡೆದು ತೃಪ್ತಿಯಾಗಿರುವ ಜನರನ್ನು ಕಂಡುಕೊಳ್ಳುವೆನು. ಅವರು ಹೇಳುವುದೇನೆಂದರೆ, ‘ಯೆಹೋವನು ಏನೂ ಮಾಡುವುದಿಲ್ಲ. ಅವನು ಸಹಾಯವನ್ನೂ ಮಾಡುವುದಿಲ್ಲ. ಜನರಿಗೆ ಕೆಡುಕನ್ನೂ ಮಾಡುವುದಿಲ್ಲ.’ ಅಂಥವರನ್ನು ನಾನು ಹಿಡಿದು ಶಿಕ್ಷಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಕಾಲದಲ್ಲಿ ನಾನು ದೀಪಗಳನ್ನು ಹಿಡಿದು, ಯೆರೂಸಲೇಮನ್ನೆಲ್ಲಾ ಹುಡುಕಿಬಿಡುವೆನು; ಯೆಹೋವನು ಮೇಲನ್ನಾಗಲಿ, ಕೇಡನ್ನಾಗಲಿ ಮಾಡನು ಎಂದು ಮನಸ್ಸಿನೊಳಗೆ ಅಂದುಕೊಳ್ಳುವವರಾಗಿ, ಮಡ್ಡಿಯಂತೆ ಮಂದವಾಗಿರುವ ದ್ರಾಕ್ಷಾರಸಕ್ಕೆ ಸಮಾನರಾದ ಜನರನ್ನು ದಂಡಿಸುವೆನು.
Kannada BSI Bible 2016
ಆ ಕಾಲದಲ್ಲಿ ಆಗುವದೇನಂದರೆ--ನಾನು ಯೆರೂಸಲೇಮನ್ನು ದೀಪಗಳಿಂದ ಶೋಧಿಸುವೆನು; ಕರ್ತನು ಒಳ್ಳೇದನ್ನಾದರೂ ಕೆಟ್ಟದ್ದನ್ನಾದರೂ ಮಾಡು ವದಿಲ್ಲವೆಂದು ತಮ್ಮ ಹೃದಯಗಳಲ್ಲಿ ಅನ್ನುವವರಾಗಿ ಮರೆಯಾದವುಗಳ ಮೇಲೆ ಕಟ್ಟಿಕೊಂಡಿರುವ ಮನುಷ್ಯ ರನ್ನು ದಂಡಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕಾಲದಲ್ಲಿ ನಾನು ದೀಪಗಳನ್ನು ಹಿಡಿದು ಯೆರೂಸಲೇಮನ್ನೆಲ್ಲಾ ಹುಡುಕಿಬಿಡುವೆನು; ಯೆಹೋವನು ಮೇಲನ್ನಾಗಲಿ ಕೇಡನ್ನಾಗಲಿ ಮಾಡನು ಎಂದು ಮನಸ್ಸಿನೊಳಗೆ ಅಂದುಕೊಳ್ಳುವವರಾಗಿ ಮಡ್ಡಿಯ ಮೇಲೆ ಮಂದವಾಗಿರುವ ದ್ರಾಕ್ಷಾರಸಕ್ಕೆ ಸಮಾನರಾದ ಜನರನ್ನು ದಂಡಿಸುವೆನು.
Kannada Bible (KNCL) BSI 2016
“ಆಗ ದೀಪವನ್ನು ಹಿಡಿದುಕೊಂಡು ಜೆರುಸಲೇಮನ್ನೆಲ್ಲಾ ಹುಡುಕಿಬಿಡುವೆನು. ‘ಸರ್ವೇಶ್ವರ ಮೇಲನ್ನಾಗಲಿ, ಕೇಡನ್ನಾಗಲಿ ಏನನ್ನೂ ಮಾಡುವುದಿಲ್ಲ’ ಎಂದುಕೊಳ್ಳುವ ಮದ್ಯದ ಮಡ್ಡಿಯಂಥ ಜಡ ಮನಸ್ಕರನ್ನು ದಂಡಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಕಾಲದಲ್ಲಿ, ನಾನು ಯೆರೂಸಲೇಮನ್ನು ದೀಪಗಳಿಂದ ಹುಡುಕಿಬಿಡುವೆನು. ‘ಯೆಹೋವ ದೇವರು ಒಳ್ಳೆಯದನ್ನಾದರೂ ಕೆಟ್ಟದ್ದನ್ನಾದರೂ ಮಾಡುವುದಿಲ್ಲ’ ಎಂದುಕೊಂಡು ಮಡ್ಡಿಯ ಮೇಲೆ ಮಂದವಾಗಿರುವ ದ್ರಾಕ್ಷಾರಸಕ್ಕೆ ಸಮಾನರಾದ ಜನರನ್ನೂ ದಂಡಿಸುವೆನು.