Zephaniah 1:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ತನ್ನ ಕೋಪವನ್ನು ಆ ದಿವಸದಲ್ಲಿ ತೋರಿಸುವನು. ಆ ದಿವಸಗಳಲ್ಲಿ ಮಹಾ ಸಂಕಟಗಳಿರುವವು. ಅವು ನಾಶನದ ದಿವಸಗಳಾಗಿರುವವು. ಆ ದಿವಸವು ಕತ್ತಲು, ಕಾರ್ಮುಗಿಲು ಕವಿದ ಬಿರುಗಾಳಿಯ ದಿವಸವಾಗಿರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನದ ಸುದ್ದಿ ಕಹಿಯಾದುದು, ಅದು ರೌದ್ರದ ದಿನ, ಶ್ರಮಸಂಕಟಗಳ ದಿನ, ಹಾಳುಪಾಳುಮಾಡುವ ದಿನ, ಕತ್ತಲಿನ ಮೊಬ್ಬಿನ ದಿನ, ಕಾರ್ಮುಗಿಲ ಕಗ್ಗತ್ತಲ ದಿನ!
Kannada BSI Bible 2016
ಆ ದಿನವು ರೌದ್ರದ ದಿನವು, ಇಕ್ಕಟ್ಟು ಸಂಕಟಗಳ ದಿನವು, ಹಾಳು ಪಾಳುಗಳ ದಿನವು, ಕತ್ತಲೆ ಮೊಬ್ಬುಗಳ ದಿನವು, ಮೇಘ ಮೋಡಗಳ ದಿನವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿನವು ರೌದ್ರದ ದಿನ, ಶ್ರಮಸಂಕಟಗಳ ದಿನ, ಹಾಳುಪಾಳುಮಾಡುವ ದಿನ, ಕತ್ತಲಿನ ಮೊಬ್ಬಿನ ದಿನ, ಕಾರ್ಮುಗಿಲ ಕಗ್ಗತ್ತಲ ದಿನ.
Kannada Bible (KNCL) BSI 2016
ಅದು ರೌದ್ರದ ದಿನ, ಕಷ್ಟ - ಸಂಕಟದ ದಿನ, ನಾಶವಿನಾಶದ ದಿನ, ಕತ್ತಲು ಕಾರ್ಗತ್ತಲ ದಿನ, ಕಾರ್ಮುಗಿಲು ಕವಿದ ಕರಾಳ ದಿನ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿವಸವು ರೌದ್ರದ ದಿವಸವು, ಇಕ್ಕಟ್ಟು ಸಂಕಟಗಳ ದಿವಸವು, ಹಾಳುಪಾಳುಗಳ ದಿವಸವು, ಕತ್ತಲೆ ಮಬ್ಬುಗಳ ದಿವಸವು, ಕಾರ್ಮುಗಿಲ ಕಗ್ಗತ್ತಲ ದಿವಸವು,