Zephaniah 1:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದು ಒಂದು ಯುದ್ಧದ ದಿವಸದಂತಿರುವುದು; ಎಲ್ಲೆಲ್ಲೂ ಕೊಂಬು, ತುತ್ತೂರಿಗಳ ಧ್ವನಿಗಳನ್ನು ಜನರು ಬುರುಜು, ಕೊತ್ತಲಗಳಿಂದ ಕೇಳಿಸಿಕೊಳ್ಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೋಟೆಗಳನ್ನೂ, ದೊಡ್ಡ ಕೊತ್ತಲುಗಳನ್ನೂ ಹಿಡಿಯಲು, ಆರ್ಭಟಿಸಿ ಕೊಂಬೂದುವ ದಿನ.
Kannada BSI Bible 2016
ಅದರ ಕೋಟೆಯುಳ್ಳ ಪಟ್ಟಣಗಳಿಗೆ ವಿರೋಧವಾಗಿಯೂ ಉನ್ನತವಾದ ಗೋಪುರಗಳಿಗೆ ವಿರೋಧವಾಗಿಯೂ ತುತೂರಿ ಅರ್ಭಟಗಳ ದಿನವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೋಟೆಗಳನ್ನೂ ದೊಡ್ಡ ಕೊತ್ತಲಗಳನ್ನೂ ಹಿಡಿಯಲು ಆರ್ಭಟಿಸಿ ಕೊಂಬೂದುವ ದಿನ.
Kannada Bible (KNCL) BSI 2016
ಕೋಟೆಕೊತ್ತಲಗಳನ್ನು, ಘನಗೋಪುರಗಳನ್ನು ಆಕ್ರಮಿಸಲು ಯುದ್ಧಕಹಳೆಯು ಮೊಳಗುವ ದಿನ, ಯುದ್ಧಘೋಷಣೆಗಳನ್ನು ಆರ್ಭಟಿಸುವ ದಿನ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೋಟೆಯುಳ್ಳ ಪಟ್ಟಣಗಳಿಗೆ ವಿರೋಧವಾಗಿಯೂ ಉನ್ನತವಾದ ಗೋಪುರಗಳಿಗೆ ವಿರೋಧವಾಗಿಯೂ ತುತೂರಿ ಆರ್ಭಟಗಳ ದಿವಸವು.