Zephaniah 1:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಹೇಳುವುದೇನೆಂದರೆ, “ಜನರ ಜೀವನವನ್ನು ನಾನು ಬಹು ಕಷ್ಟಕರವಾಗಿ ಮಾಡುವೆನು. ಅವರು ಕುರುಡರಂತೆ ಅತ್ತಿತ್ತ ತೊಳಲಾಡುವರು. ತಾವು ಎಲ್ಲಿಗೆ ಹೋಗುತ್ತಿದ್ದಾರೆಂದು ಅವರಿಗೆ ತಿಳಿಯದು. ಯಾಕೆಂದರೆ ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡಿದ್ದಾರೆ. ಅನೇಕ ಮಂದಿ ಕೊಲ್ಲಲ್ಪಡುವರು. ಅವರ ರಕ್ತವು ಭೂಮಿಗೆ ಸುರಿಯಲ್ಪಡುವುದು. ಅವರ ಹೆಣಗಳು ಮಲದ ಹಾಗೆ ನೆಲದಲ್ಲಿ ಬೀಳುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನಾದ ನನಗೆ ಜನರು ಪಾಪಮಾಡಿದ ಕಾರಣ ಕುರುಡರಂತೆ ನಡೆಯುವ ಹಾಗೆ ಅವರನ್ನು ಸಂಕಟಪಡಿಸುವೆನು; ಅವರ ರಕ್ತವು ಧೂಳಿನಂತೆ ಚೆಲ್ಲಿ ಹೋಗುವುದು, ಅವರ ಮಾಂಸವು ಮಲದ ಹಾಗೆ ಬಿದ್ದಿರುವುದು!
Kannada BSI Bible 2016
ಆಗ ನಾನು ಮನುಷ್ಯರ ಮೇಲೆ ಇಕ್ಕಟ್ಟು ತರಿಸುವೆನು; ಅವರು ಕುರುಡರ ಹಾಗೆ ನಡೆಯುವರು; ಕರ್ತನಿಗೆ ವಿರೋಧವಾಗಿ ಅವರು ಪಾಪಮಾಡಿದ್ದಾರೆ; ಅವರ ರಕ್ತವು ದೂಳಿನಂತೆಯೂ ಅವರ ಮಾಂಸವು ಗೊಬ್ಬರ ದಂತೆಯೂ ಸುರಿಯಲ್ಪಡುವದು.ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನಾದ ನನಗೆ ಜನರು ಪಾಪಮಾಡಿದ ಕಾರಣ ಕುರುಡರಂತೆ ನಡೆಯುವ ಹಾಗೆ ಅವರನ್ನು ಸಂಕಟಪಡಿಸುವೆನು; ಅವರ ರಕ್ತವು ದೂಳಿನಂತೆ ಚೆಲ್ಲಿಹೋಗುವದು, ಅವರ ಮಾಂಸವು ಮಲದ ಹಾಗೆ ಬಿದ್ದಿರುವದು.
Kannada Bible (KNCL) BSI 2016
ಸರ್ವೇಶ್ವರ ಇಂತೆನ್ನುತ್ತಾರೆ, “ಮಾನವರ ಮೇಲೆ ಕಷ್ಟ - ಸಂಕಷ್ಟಗಳನ್ನು ಬರಮಾಡುವೆನು; ಅವರು ಕುರುಡರಂತೆ ತಡಕಾಡುವರು. ಏಕೆಂದರೆ ಅವರು ನನಗೆ ವಿರೋಧವಾಗಿ ಪಾಪಮಾಡಿದ್ದಾರೆ; ಅವರ ರಕ್ತವನ್ನು ನೀರಿನಂತೆ ಚೆಲ್ಲಲಾಗುವುದು; ಅವರ ಹೆಣಗಳನ್ನು ಕಸದಂತೆ ಕೊಳೆಯಲು ಬಿಡಲಾಗುವುದು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾನು ಮನುಷ್ಯರ ಮೇಲೆ ಇಕ್ಕಟ್ಟು ತರಿಸುವೆನು. ಅವರು ಕುರುಡರ ಹಾಗೆ ತಡಕುವರು. ಏಕೆಂದರೆ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದಾರೆ. ಅವರ ರಕ್ತವು ಧೂಳಿನಂತೆಯೂ ಅವರ ಮಾಂಸವು ಗೊಬ್ಬರದಂತೆಯೂ ಸುರಿದಿರುವುದು.