Zephaniah 1:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಲೋಕದೊಳಗಿರುವ ಎಲ್ಲಾ ಮನುಷ್ಯರನ್ನೂ ಪ್ರಾಣಿಗಳನ್ನೂ ಆಕಾಶದಲ್ಲಿರುವ ಎಲ್ಲಾ ಪಕ್ಷಿಗಳನ್ನೂ ನೀರಿನಲ್ಲಿರುವ ಎಲ್ಲಾ ಮೀನುಗಳನ್ನೂ ನಾನು ನಾಶಮಾಡುವೆನು. ಎಲ್ಲಾ ದುಷ್ಟ ಜನರನ್ನೂ ಮತ್ತು ಅವರನ್ನು ಪಾಪಕ್ಕೆ ನಡಿಸುವ ಎಲ್ಲಾ ವಸ್ತುಗಳನ್ನೂ ನಾನು ನಾಶಮಾಡುವೆನು. ಭೂಮಿಯ ಮೇಲಿರುವ ಎಲ್ಲಾ ಜನರನ್ನು ನಿರ್ಮೂಲ ಮಾಡುವೆನು.” ಈ ವಿಷಯಗಳನ್ನು ಯೆಹೋವನು ತಿಳಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನುಷ್ಯರನ್ನೂ, ಪಶುಗಳನ್ನೂ, ಮತ್ತು ಆಕಾಶದ ಪಕ್ಷಿಗಳನ್ನೂ, ಸಮುದ್ರದ ಮೀನುಗಳನ್ನೂ ನಾಶಪಡಿಸುವೆನು; ವಿಗ್ರಹಗಳೆಂಬ ವಿಘ್ನಗಳನ್ನೂ, ಅವುಗಳಿಗೆ ಅಡ್ಡಬೀಳುವ ದುಷ್ಟರನ್ನೂ ಸಂಹರಿಸುವೆನು; ಭೂಮಿಯ ಮೇಲಿಂದ ದುಷ್ಟರ ಸಂತಾನವನ್ನೂ ಕಿತ್ತುಹಾಕುವೆನು” ಇದು ಯೆಹೋವನ ನುಡಿ.
Kannada BSI Bible 2016
ಮನುಷ್ಯರನ್ನೂ ಮೃಗಗಳನ್ನೂ ನಾಶ ಮಾಡುವೆನು. ಆಕಾಶದ ಪಕ್ಷಿಗಳನ್ನೂ ಸಮುದ್ರದ ವಿಾನುಗಳನ್ನೂ ದುಷ್ಟರ ಸಂಗಡ ಅಭ್ಯಂತರ ಮಾಡುವ ವುಗಳನ್ನೂ ಹಾಳುಮಾಡುವೆನು: ಮನುಷ್ಯರನ್ನು ದೇಶದೊಳಗಿಂದ ಕಡಿದುಬಿಡುವೆನು ಎಂದು ಕರ್ತನು ಅನ್ನುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನಪಶುಗಳನ್ನೂ ಆಕಾಶದ ಪಕ್ಷಿಗಳನ್ನೂ ಸಮುದ್ರದ ಮೀನುಗಳನ್ನೂ ನಾಶಪಡಿಸುವೆನು; ವಿಗ್ರಹಗಳೆಂಬ ವಿಘ್ನಗಳನ್ನೂ ಅವುಗಳಿಗೆ ಎಡವುವ ದುಷ್ಟರನ್ನೂ ಸಂಹರಿಸುವೆನು; ಭೂವಿುಯ ಮೇಲಿಂದ ನರಸಂತಾನವನ್ನು ಕಿತ್ತುಹಾಕುವೆನು; ಇದು ಯೆಹೋವನ ನುಡಿ.
Kannada Bible (KNCL) BSI 2016
ಮನುಷ್ಯರು, ಮೃಗಗಳು, ಆಕಾಶದ ಪಕ್ಷಿಗಳು, ಸಮುದ್ರದ ಮೀನುಗಳು - ಇವೆಲ್ಲವನ್ನು ನಾಶಪಡಿಸುವೆನು. ದುರ್ಜನರು ಬಿದ್ದು ಸಾಯುವಂತೆ ಮಾಡುವೆನು; ನರಸಂತಾನವನ್ನು ಧರೆಯ ಮೇಲಿಂದ ಕಿತ್ತುಹಾಕುವೆನು.” ಇದು ಸರ್ವೇಶ್ವರಸ್ವಾಮಿಯ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮನುಷ್ಯರನ್ನೂ ಮೃಗಗಳನ್ನೂ ನಾಶಮಾಡುವೆನು. ಆಕಾಶದ ಪಕ್ಷಿಗಳನ್ನೂ ಸಮುದ್ರದ ಮೀನುಗಳನ್ನೂ ನಾಶಮಾಡುವೆನು.” “ಮನುಷ್ಯರನ್ನು ದೇಶದೊಳಗಿಂದ ಕಡಿದು ಬಿಡುವಾಗ ದುಷ್ಟರಿಗೆ ಉಳಿಯುವುದು ಕಸದರಾಶಿಯೇ,” ಎಂದು ಯೆಹೋವ ದೇವರು ಹೇಳುತ್ತಾರೆ.