Zephaniah 1:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸಮಯದಲ್ಲಿ ಹೊಸ್ತಿಲನ್ನು ಹಾರಿ ತಮ್ಮ ಒಡೆಯರ ಮನೆಯನ್ನು ತಮ್ಮ ಸುಳ್ಳು, ಮೋಸ, ಹಿಂಸೆಗಳಿಂದ ತುಂಬಿರುವವರನ್ನು ಶಿಕ್ಷಿಸುತ್ತೇನೆ” ಎಂದು ಯೆಹೋವನು ನುಡಿಯುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೊಸ್ತಿಲನ್ನು ದಾಟಿ ಮೋಸ ಹಿಂಸೆಗಳಿಂದ ದೋಚಿದ್ದನ್ನು, ತಮ್ಮ ಒಡೆಯನ ಮನೆಯೊಳಗೆ ತುಂಬಿಸುವವರೆಲ್ಲರನ್ನು ಆ ದಿನದಲ್ಲಿ ದಂಡಿಸುವೆನು.
Kannada BSI Bible 2016
ಆ ದಿನದಲ್ಲಿ ಹೊಸ್ತಿಲನ್ನು ಹಾರಿ ದಾಟುವವರೆಲ್ಲರನ್ನೂ ತಮ್ಮ ಯಜಮಾನರ ಮನೆ ಗಳನ್ನು ಬಲಾತ್ಕಾರ ಮೋಸಗಳಿಂದ ತುಂಬಿಸುವವರನ್ನೂ ದಂಡಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೊಸ್ತಿಲಹಾರಿ ನುಗ್ಗಿ ಮೋಸಹಿಂಸೆಗಳಿಂದ ದೋಚಿದ್ದನ್ನು ತಮ್ಮ ಒಡೆಯನ ಮನೆಯೊಳಗೆ ತುಂಬಿಸುವವರೆಲ್ಲರನ್ನು ಆ ದಿನದಲ್ಲಿ ದಂಡಿಸುವೆನು.
Kannada Bible (KNCL) BSI 2016
ಹೊಸ್ತಿಲನ್ನು ದಾಟಿ ಮೋಸ, ವಂಚನೆ, ಹಿಂಸಾಚಾರಗಳಿಂದ ದೋಚಿದವುಗಳನ್ನು ತಂದು ತಮ್ಮ ದೇವರ ಮಂದಿರವನ್ನು ತುಂಬಿಸುವ ಎಲ್ಲರನ್ನೂ ಆ ದಿನದಂದು ನಾನು ದಂಡಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿನದಲ್ಲಿ ಹೊಸ್ತಿಲನ್ನು ದಾಟುವವರೆಲ್ಲರನ್ನೂ ತಮ್ಮ ದೇವರುಗಳ ಆಲಯಗಳನ್ನು ಹಿಂಸಾಚಾರದಿಂದಲೂ ಮೋಸದಿಂದಲೂ ತುಂಬಿಸುವವರನ್ನೂ ದಂಡಿಸುವೆನು.