Zephaniah 2:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಯೆಹೋವನಿಗೆ ಭಯಪಡುವರು. ಯಾಕೆಂದರೆ ಆತನು ಅವರ ದೇವರುಗಳನ್ನು ನಾಶಮಾಡಿದ್ದಾನೆ. ಆಗ ದೂರದಲ್ಲಿರುವ ಜನರೆಲ್ಲರೂ ಆತನನ್ನು ಆರಾಧಿಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಅವರಿಗೆ ಭಯಂಕರನಾಗುವನು; ಲೋಕದ ದೇವರುಗಳನ್ನೆಲ್ಲಾ ನಾಶಮಾಡುವನು; ಸಮಸ್ತ ಜನರು, ಪ್ರತಿಯೊಂದು ಪ್ರಾಂತ್ಯದ ನಿವಾಸಿಗಳು ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು.
Kannada BSI Bible 2016
ಕರ್ತನು ಅವರಿಗೆ ಭಯಂಕರನಾಗಿ ರುವನು. ಆತನು ಭೂಮಿಯ ಎಲ್ಲಾ ದೇವರುಗಳನ್ನು ಕ್ಷೀಣಮಾಡುವನು; ಅನ್ಯಜನಾಂಗಗಳ ದ್ವೀಪಗಳವ ರೆಲ್ಲರು ತಮ್ಮ ತಮ್ಮ ಸ್ಥಳಗಳಿಂದ ಆತನನ್ನು ಆರಾ ಧಿಸುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಅವರಿಗೆ ಭಯಂಕರವಾಗುವನು; ಲೋಕದ ದೇವರುಗಳನ್ನೆಲ್ಲಾ ಕ್ಷಯಿಸಿಬಿಡುವನು; ಸಮಸ್ತ ಜನರು, ಅಂದರೆ ಸಮುದ್ರ ಪ್ರಾಂತದ ನಿವಾಸಿಗಳಾದ ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು.
Kannada Bible (KNCL) BSI 2016
ಸರ್ವೇಶ್ವರ ಅವರಿಗೆ ಭಯಭೀತಿ ಉಂಟುಮಾಡುವರು; ಅವರ ಭೂಮಿಯಲ್ಲಿನ ದೇವತೆಗಳನ್ನೆಲ್ಲಾ ಕ್ಷಯಿಸಿಬಿಡುವರು; ಅದಾದ ನಂತರ ಪ್ರತಿಯೊಂದು ರಾಷ್ಟ್ರದವರು ತಮ್ಮ ತಮ್ಮ ನಾಡಿನಲ್ಲೇ ಸರ್ವೇಶ್ವರಸ್ವಾಮಿಯನ್ನು ಆರಾಧಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಭೂಮಿಯ ಎಲ್ಲಾ ದೇವರುಗಳನ್ನು ನಾಶಮಾಡುವಾಗ, ಯೆಹೋವ ದೇವರು ಅವರಿಗೆ ಭಯಂಕರವಾಗಿರುವರು. ಇತರ ಜನಾಂಗಗಳ ದ್ವೀಪಗಳವರೆಲ್ಲರು ತಮ್ಮ ತಮ್ಮ ಸ್ಥಳಗಳಲ್ಲಿ ಅವರನ್ನು ಆರಾಧಿಸುವರು.