Zephaniah 2:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ಆಮೇಲೆ ಉತ್ತರಕ್ಕೆ ಮುಖಮಾಡಿ ಅಶ್ಶೂರವನ್ನು ಶಿಕ್ಷಿಸುವನು. ಆತನು ನಿನೆವೆ ಪಟ್ಟಣವನ್ನು ಶಿಕ್ಷಿಸಿದಾಗ ಅದು ನಿರ್ಜನವಾದ ಮರುಭೂಮಿಯಾಗುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಉತ್ತರಕ್ಕೆ ಕೈಚಾಚಿ ಅಶ್ಶೂರವನ್ನು ಧ್ವಂಸ ಮಾಡುವನು; ನಿನವೆಯನ್ನು ಹಾಳುಮಾಡಿ ನೀರಿಲ್ಲದ ಮರುಭೂಮಿಯಂತೆ ಒಣಗಿಸಿಬಿಡುವನು.
Kannada BSI Bible 2016
ಆತನು ತನ್ನ ಕೈಯನ್ನು ಉತ್ತರದ ಮೇಲೆ ಚಾಚಿ ಅಶ್ಶೂರನ್ನು ನಾಶಮಾಡಿ ನಿನೆವೆಯನ್ನು ಹಾಳಾಗಿಯೂ ಅರಣ್ಯದಂತೆ ಒಣಗಿ ದ್ದಾಗಿಯೂ ಮಾಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಬಡಗಲಿಗೆ ಕೈಚಾಚಿ ಅಶ್ಶೂರವನ್ನು ಧ್ವಂಸಪಡಿಸುವನು; ನಿನೆವೆಯನ್ನು ಹಾಳುಮಾಡಿ ಮರುಭೂವಿುಯಂತೆ ಒಣಗಿಸಿಬಿಡುವನು.
Kannada Bible (KNCL) BSI 2016
ಅಸ್ಸೀರಿಯವನ್ನು ಸರ್ವೇಶ್ವರ ತಮ್ಮ ಭುಜಬಲದಿಂದ ಧ್ವಂಸಮಾಡುವರು; ನಿನೆವೆ ಪಟ್ಟಣವನ್ನು ಹಾಳುಬಿದ್ದ ಅವಶೇಷವಾಗಿ, ನೀರಿಲ್ಲದ ಮರುಭೂಮಿಯಾಗಿ ಮಾಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ತನ್ನ ಕೈಯನ್ನು ಉತ್ತರದ ಮೇಲೆ ಚಾಚಿ, ಅಸ್ಸೀರಿಯರನ್ನು ನಾಶಮಾಡಿ ನಿನೆವೆಯನ್ನು ಹಾಳಾಗಿಯೂ ಮರುಭೂಮಿಯಂತೆ ಒಣಗಿದ್ದಾಗಿಯೂ ಮಾಡುವರು.