Zephaniah 2:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಮೇಲೆ ಆ ಹಾಳುಬಿದ್ದ ನಗರದಲ್ಲಿ ಕಾಡುಪ್ರಾಣಿಗಳೂ ಕುರಿಗಳೂ ವಾಸಮಾಡುವವು. ಕಾಗೆಗಳೂ ಗೂಬೆಗಳೂ ಪಟ್ಟಣದ ಸ್ತಂಭಗಳ ಮೇಲೆ ಕುಳಿತುಕೊಂಡು ಒಂದನ್ನೊಂದು ಕರೆಯುವವು. ಬಾಗಿಲ ಹೊಸ್ತಿಲಲ್ಲಿ ಕಾಗೆಗಳು ಕುಳಿತುಕೊಳ್ಳುವವು. ಕಪ್ಪುಪಕ್ಷಿಗಳು ನಿರ್ಜನವಾದ ಮನೆಗಳ ಮೇಲೆ ಕುಳಿತುಕೊಳ್ಳುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನಾಂಗಗಳ ಪಶುಗಳೆಲ್ಲಾ ಮಂದೆಮಂದೆಯಾಗಿ ಅದರ ಮಧ್ಯದಲ್ಲಿ ಮಲಗಿಕೊಳ್ಳುವವು; ಕೊಕ್ಕರೆಯೂ, ಮುಳ್ಳುಹಂದಿಯೂ ಹಟ್ಟಿಗಳಲ್ಲಿ ವಾಸಮಾಡಿಕೊಳ್ಳುವವು. ಗೂಬೆಯು ಕಿಟಕಿಗಳಲ್ಲಿ ಮನೆಕಂಬಗಳ ಮೇಲೆ ಚಿಲಿಪಿಲಿ ಗಾನವು ತಂಗುವವು; ಕಾಗೆಗಳ ಕೂಗು ಹೊಸ್ತಿಲುಗಳಲ್ಲಿ ಕೇಳುವುದು; ದೇವದಾರು ಹಲಿಗೆಯ ಹೊದಿಕೆಯು ಕೀಳಲ್ಪಡುವುದು.
Kannada BSI Bible 2016
ಅದರ ಮಧ್ಯದಲ್ಲಿ ಮಂದೆಗಳೂ ಜನಾಂಗಗಳ ಮೃಗಗಳೆಲ್ಲವೂ ಮಲಗುವವು; ಬಕಪಕ್ಷಿಯೂ ಮುಳ್ಳು ಹಂದಿಯೂ ಅದರ ಮೇಲಿನ ಅವುಗಳ ಹಾಸುಗಳಲ್ಲಿ ಇಳುಕೊಳ್ಳುವವು; ಕಿಟಕಿಗಳಲ್ಲಿ ಹಾಡುವ ಶಬ್ದವಿರುವದು; ಹೊಸ್ತಿಲಗಳಲ್ಲಿ ಹಾಳು ಇರುವದು; ದೇವದಾ ರಿನ ಕೆಲಸವನ್ನು ಬೈಲುಮಾಡುವನು.ನಿಶ್ಚಿಂತೆಯಾಗಿ ವಾಸಿಸಿದಂಥ ತಾನೇ ಹೊರತು ಮತ್ತೊಂದಿಲ್ಲವೆಂದು ತನ್ನೊಳಗೆ ಅಂದುಕೊಂಡಂಥ ಉಲ್ಲಾಸದ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದನ್ನು ಹಾದು ಹೋಗುವವರೆಲ್ಲರು ಸಿಳ್ಳಿಟ್ಟು ಕೈ ಅಲ್ಲಾಡಿಸುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನಾಂಗಗಳ ಪಶುಗಳೆಲ್ಲಾ ಮಂದೆಮಂದೆಯಾಗಿ ಅದರ ಮಧ್ಯದಲ್ಲಿ ಮಲಗಿಕೊಳ್ಳುವವು; ಕೊಕ್ಕರೆಯೂ ಮುಳ್ಳುಹಂದಿಯೂ ಅದರ ಬೋದಿಗೆಗಳಲ್ಲಿ ವಾಸಮಾಡಿಕೊಳ್ಳುವವು; ಕಿಟಕಿಗಳಲ್ಲಿ ಚಿಲಿಪಿಲಿಗಾನವು ಕೇಳಿಸುವದು; ಹೊಸ್ತಿಲುಗಳಲ್ಲಿ ಹಾಳುಬಡಿಯುವದು; ದೇವದಾರು ಹಲಿಗೆಯ ಹೊದಿಕೆಯು ಕೀಳಲ್ಪಡುವದು.
Kannada Bible (KNCL) BSI 2016
ಅದು ದನಗಳ ಹಿಂಡುಗಳಿಗೂ ಕುರಿಗಳ ಮಂದೆಗಳಿಗೂ ಎಲ್ಲಾ ತರದ ಪ್ರಾಣಿಗಳಿಗೂ ಮಲಗುವ ಹಟ್ಟಿ ಆಗುವುದು; ಅದರ ಹಾಳುಬಿದ್ದ ಮನೆಗಂಬಗಳ ಮೇಲೆ ಗೂಬೆಗಳೂ, ಗುಬ್ಬಚ್ಚಿಗಳೂ ತಂಗುವುವು. ಗೂಬೆಯ ಘೂಂಕಾರವು ಕಿಟಕಿಯಿಂದ ಕೇಳಿಬರುವುದು; ಕಾಗೆಗಳ ಕೂಗು ಬಾಗಿಲಿನ ಹೊಸ್ತಿಲಲ್ಲೇ ಕೇಳುವುದು; ದೇವದಾರು ಮರದ ತೊಲೆಗಳು ಕಳಚಿಬೀಳುವುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದು ದನಗಳ ಹಿಂಡುಗಳಿಗೂ ಕುರಿಗಳ ಮಂದೆಗಳಿಗೂ ಎಲ್ಲಾ ತರದ ಪ್ರಾಣಿಗಳಿಗೂ ಮಲಗುವ ಹಟ್ಟಿ ಆಗುವುದು, ಅದರ ಹಾಳುಬಿದ್ದ ಮನೆಯ ಕಂಬಗಳ ಮೇಲೆ ಗೂಬೆಗಳೂ, ಗುಬ್ಬಚ್ಚಿಗಳೂ ತಂಗುವುವು. ಗೂಬೆಯ ಘೂಂಕಾರವು ಕಿಟಕಿಗಳಿಂದ ಕೇಳಿಬರುವುದು, ಕಾಗೆಗಳ ಕೂಗು ಬಾಗಿಲಿನ ಹೊಸ್ತಿಲಲ್ಲೇ ಕೇಳುವುದು, ದೇವದಾರು ಮರದ ತೊಲೆಗಳು ಕಳಚಿಬೀಳುವುವು.