Zephaniah 2:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೀನರೇ, ಯೆಹೋವನ ಬಳಿಗೆ ಬನ್ನಿರಿ. ಆತನ ನಿಯಮಗಳಿಗೆ ಒಳಗಾಗಿರಿ, ಒಳ್ಳೇದನ್ನು ಮಾಡಿರಿ, ದೀನರಾಗಿರಿ. ಯೆಹೋವನು ತನ್ನ ಕೋಪಾಗ್ನಿಯನ್ನು ಪ್ರದರ್ಶಿಸುವ ದಿವಸದಲ್ಲಿ ನೀವು ರಕ್ಷಿಸಲ್ಪಡಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ನಿಯಮವನ್ನು ಕೈಕೊಂಡು ನಡೆಯುವ ಲೋಕದ ದೀನರೇ, ನೀವೆಲ್ಲರೂ ಯೆಹೋವನ ನೀತಿಯನ್ನು ಅನುಸರಿಸಿರಿ, ಧರ್ಮವನ್ನು ಅಭ್ಯಾಸಿಸಿರಿ, ನಮ್ರತೆಯನ್ನು ಹೊಂದಿಕೊಳ್ಳಿರಿ; ಬಹುಶಃ ಯೆಹೋವನ ಸಿಟ್ಟಿನ ದಿನದಲ್ಲಿ ನೀವು ಮರೆಯಾಗುವಿರಿ.
Kannada BSI Bible 2016
ಆತನ ನ್ಯಾಯತೀರ್ಪುಗಳನ್ನು ಮಾಡುವ ಲೋಕದ ದೀನರೆಲ್ಲರೇ, ಕರ್ತನನ್ನು ಹುಡುಕಿರಿ, ನೀತಿ ಯನ್ನು ಹುಡುಕಿರಿ, ವಿನಯವನ್ನು ಹುಡುಕಿರಿ; ಒಂದು ವೇಳೆ ಕರ್ತನ ಕೋಪದ ದಿನದಲ್ಲಿ ಮರೆಯಾಗುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ನಿಯಮವನ್ನು ಕೈಕೊಂಡ ಲೋಕದ ದೀನರೇ, ನೀವೆಲ್ಲರೂ ಯೆಹೋವನನ್ನು ಆಶ್ರಯಿಸಿರಿ, ಸದ್ಧರ್ಮವನ್ನು ಅಭ್ಯಾಸಿಸಿರಿ, ದೈನ್ಯವನ್ನು ಹೊಂದಿಕೊಳ್ಳಿರಿ; ಯೆಹೋವನ ಸಿಟ್ಟಿನ ದಿನದಲ್ಲಿ ಒಂದು ವೇಳೆ ಮರೆಯಾಗುವಿರಿ.
Kannada Bible (KNCL) BSI 2016
ನಾಡಿನ ದೀನ ಜನರೇ, ಸರ್ವೇಶ್ವರನ ಆಜ್ಞೆಯನ್ನು ಕೈಗೊಂಡು ನಡೆಯುವವರೇ, ನೀವೆಲ್ಲರೂ ಸ್ವಾಮಿಯ ಕಡೆಗೆ ತಿರುಗಿಕೊಳ್ಳಿ. ಒಳ್ಳೆಯದನ್ನು ಮಾಡಿರಿ, ಸ್ವಾಮಿಯ ಮುಂದೆ ನಿಮ್ಮನ್ನೇ ತಗ್ಗಿಸಿಕೊಳ್ಳಿ; ಸರ್ವೇಶ್ವರಸ್ವಾಮಿಯ ಆ ಸಿಟ್ಟಿನ ದಿನದಂದು ಬಹುಶಃ ನೀವು ಸುರಕ್ಷಿತರಾಗುವಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇಶದ ದೀನರೇ, ಅವರ ಆಜ್ಞೆಗಳನ್ನು ಕೈಕೊಂಡು ನಡೆಯುವವರೆಲ್ಲರೇ ಯೆಹೋವ ದೇವರನ್ನು ಹುಡುಕಿರಿ. ನೀತಿಯನ್ನು ಹುಡುಕಿರಿ, ವಿನಯವನ್ನು ಹುಡುಕಿರಿ. ಒಂದು ವೇಳೆ ಯೆಹೋವ ದೇವರ ಕೋಪದ ದಿವಸದಲ್ಲಿ ಆಶ್ರಯ ಹೊಂದುವಿರಿ.