Zephaniah 2:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಜೀವದಾಣೆ, ಮೋವಾಬ್ಯರೂ ಅಮ್ಮೋನ್ಯರೂ ಸೊದೋಮ್ ಗೊಮೋರದವರಂತೆ ನಾಶವಾಗುವರು. ನಾನು ಸರ್ವಶಕ್ತನಾದ ಇಸ್ರೇಲರ ದೇವರಾಗಿರುವೆನು. ನಾನು ವಾಗ್ದಾನ ಮಾಡುವದೇನೆಂದರೆ, ಆ ರಾಜ್ಯಗಳು ಸಂಪೂರ್ಣವಾಗಿ ನಾಶವಾಗುವವು. ಅವರ ಭೂಮಿಯು ಕಳೆಗಳಿಂದ ತುಂಬಿಹೋಗುವದು. ಅದು ಮೃತ್ಯುಸಮುದ್ರದ ಉಪ್ಪಿನಿಂದ ತುಂಬಿಹೋದಂತಿರುವದು. ನನ್ನ ಜನರಲ್ಲಿ ಉಳಿದವರು ಅವರ ದೇಶವನ್ನೂ ಅಲ್ಲಿ ಉಳಿದಿರುವ ವಸ್ತುಗಳನ್ನೂ ತಮ್ಮ ವಶಮಾಡಿಕೊಳ್ಳುವರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರ ದೇವರಾದ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಸೊದೋಮಿನ ಗತಿಯೇ ಮೋವಾಬಿಗೂ ಆಗುವುದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವುದು; ಆ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ, ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯ ನಾಶನಕ್ಕೆ ಈಡಾಗುವವು; ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು. ಅಳಿದುಳಿದ ನನ್ನ ಜನರಿಗೆ ಅವು ಸ್ವಾಸ್ತ್ಯವಾಗುವವು.”
Kannada BSI Bible 2016
ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳು ವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಮೋವಾಬು ಸೊದೋಮಿನ ಹಾಗಾಗುವದು; ಅಮ್ಮೋ ನನ ಮಕ್ಕಳು ಗೊಮೋರದ ಹಾಗಾಗುವರು; ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಣಿಗಳುಳ್ಳಂಥ ನಿತ್ಯವಾಗಿ ಹಾಳಾಗುವಂಥ ಸ್ಥಳವಾಗುವರು; ನನ್ನ ಜನರಲ್ಲಿ ಉಳಿದವರು ಅವರನ್ನು ಸುಲುಕೊಳ್ಳುವರು; ನನ್ನ ಜನರಲ್ಲಿ ಮಿಕ್ಕಾದವರು ಅವರನ್ನು ಸ್ವಾಧೀನ ಮಾಡಿಕೊಳ್ಳುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ದೇವರಾದ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಹೀಗಿರಲು, ನನ್ನ ಜೀವದಾಣೆ, ಸೊದೋವಿುನ ಗತಿಯೇ ಮೋವಾಬಿಗೂ ಆಗುವದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವದು; ಆ ಪ್ರಾಂತಗಳು ಮುಳ್ಳುಗಿಡಗಳಿಂದಲೂ ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯನಾಶನಕ್ಕೆ ಈಡಾಗುವವು; ನನ್ನ ಪ್ರಜೆಯಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು, ಅವು ನನ್ನ ಜನಶೇಷದವರಿಗೆ ಸ್ವಾಸ್ತ್ಯವಾಗುವವು.
Kannada Bible (KNCL) BSI 2016
ಇಸ್ರಯೇಲಿನ ಜೀವಂತ ದೇವರೂ ಸೇನಾಧೀಶ್ವರ ಸರ್ವೇಶ್ವರನೂ ಆದ ನಾನು ನಿಶ್ಚಯವಾಗಿ ಹೇಳುತ್ತೇನೆ - ಸೊದೋಮಿನ ಗತಿಯೇ ಮೋವಾಬಿನ ಗತಿ ಆಗುವುದು. ಗೊಮೋರಾದ ದುರ್ಗತಿಯೇ ಅಮ್ಮೋನ್ಯರಿಗೆ ಸಂಭವಿಸುವುದು. ಈ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯನಾಶನಕ್ಕೆ ಈಡಾಗುವುವು. ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು; ಅಳಿದುಳಿದ ನನ್ನ ಜನರಿಗೆ ಅವು ಸೊತ್ತಾಗುವುವು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ನನ್ನ ಜೀವದಾಣೆ,” “ನಿಶ್ಚಯವಾಗಿ ಮೋವಾಬು ಸೊದೋಮಿನ ಅಮ್ಮೋನ್ಯರು ಗೊಮೋರದ ಹಾಗೆ ಆಗುವುದು. ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಳಿಗಳುಳ್ಳಂಥ ನಿತ್ಯವಾಗಿ ಹಾಳಾದ ಸ್ಥಳವಾಗುವರು. ನನ್ನ ಜನರಲ್ಲಿ ಉಳಿದವರು ಅವರನ್ನು ಸುಲಿದುಕೊಳ್ಳುವರು. ನನ್ನ ಜನರಲ್ಲಿ ಮಿಕ್ಕಾದವರು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವರು.”