Zephaniah 3:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆಗ ಜೆರುಸಲೇಮೇ, ನಿನ್ನ ಜನರು ನನಗೆ ವಿರುದ್ಧವಾಗಿ ಮಾಡಿದ ದುಷ್ಕೃತ್ಯಗಳಿಗಾಗಿ ನೀನು ನಾಚಿಕೆಪಡುವುದಿಲ್ಲ. ಯಾಕೆಂದರೆ ನಾನು ಆ ದುಷ್ಟ ಜನರನ್ನೆಲ್ಲಾ ನಿರ್ಮೂಲ ಮಾಡುವೆನು. ಅಹಂಕಾರ ತುಂಬಿದ ಜನರನ್ನು ನಾನು ತೆಗೆದುಬಿಡುವೆನು. ನನ್ನ ಪವಿತ್ರ ಪರ್ವತದಲ್ಲಿ ಗರ್ವವುಳ್ಳವರು ಯಾರೂ ಇರುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ನನಗೆ ಮಾಡಿದ ನಾನಾ ದುಷ್ಕೃತ್ಯಗಳು ಮುಂದಿನ ಆ ಕಾಲದಲ್ಲಿ ನಿನಗೆ ನಾಚಿಕೆಗೆ ಈಡಾಗುವವು; ಆಗ ತಮ್ಮ ಅತಿಗರ್ವದಿಂದ ಮೆರೆಯುವವರನ್ನು ನಿನ್ನೊಳಗಿಂದ ತೊಲಗಿಸಿಬಿಡುವೆನು; ಅಂದಿನಿಂದ ನನ್ನ ಪವಿತ್ರಪರ್ವತದಲ್ಲಿ ಗರ್ವಪಡದೆ ಇರುವಿ.
Kannada BSI Bible 2016
ಆ ದಿನದಲ್ಲಿ ನೀನು ನನಗೆ ವಿರೋಧ ವಾಗಿ ಪಾಪ ಮಾಡಿದ ನಿನ್ನ ಎಲ್ಲಾ ಕ್ರಿಯೆಗಳ ನಿಮಿತ್ತ ನಾಚಿಕೆಪಡದೆ ಇರುವಿ; ಆಗ ನಿನ್ನ ಹೆಚ್ಚಳದಲ್ಲಿ ಸಂಭ್ರಮ ಪಡುವವರನ್ನು ನಿನ್ನ ಮಧ್ಯದೊಳಗಿಂದ ತೆಗೆದುಹಾಕು ವೆನು; ನನ್ನ ಪರಿಶುದ್ಧ ಪರ್ವತಕ್ಕೋಸ್ಕರ ಇನ್ನು ಮೇಲೆ ನೀನು ಗರ್ವಪಡುವದೇ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ನನಗೆ ಮಾಡಿದ ನಾನಾ ದುಷ್ಕೃತ್ಯಗಳು ಮುಂದಿನ ಆ ಕಾಲದಲ್ಲಿ ನಿನಗೆ ನಾಚಿಕೆಗೀಡಾಗವು; ಆಗ ಅತಿಗರ್ವದಿಂದ ಮೆರೆಯುವವರನ್ನು ನಿನ್ನೊಳಗಿಂದ ತೊಲಗಿಸಿಬಿಡುವೆನು; ಅಂದಿನಿಂದ ನನ್ನ ಪವಿತ್ರಪರ್ವತದಲ್ಲಿ ಗರ್ವಪಡದೆ ಇರುವಿ.
Kannada Bible (KNCL) BSI 2016
ನೀನು ನನಗೆ ಎದುರಾಗಿ ದಂಗೆಯೆದ್ದು ಮಾಡಿದ ನಾನಾ ದುಷ್ಕೃತ್ಯಗಳಿಗಾಗಿ ಆ ದಿನದಂದು ನೀನು ನಾಚಿಕೆಪಡುವ ಅವಶ್ಯಕತೆ ಇರುವುದಿಲ್ಲ. ಏಕೆಂದರೆ ಅತಿ ಗರ್ವದಿಂದ ಮೆರೆಯುವವರನ್ನು ನಿನ್ನ ಮಧ್ಯೆಯಿಂದ ತೊಲಗಿಸಿಬಿಡುವೆನು. ಅಂದಿನಿಂದ ನನ್ನ ಪವಿತ್ರ ಪರ್ವತದ ಮೇಲೆ ನೀನು ಗರ್ವಪಡದೆ ಬಾಳುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿವಸದಲ್ಲಿ ನೀನು ನನಗೆ ವಿರೋಧವಾಗಿ ಮಾಡಿದ ದುಷ್ಕೃತ್ಯಗಳಿಗಾಗಿ ನಾಚಿಕೆಗೆ ಗುರಿಯಾಗುವುದಿಲ್ಲ; ಏಕೆಂದರೆ ಆಗ ಗರ್ವದಿಂದ ಹೊಗಳಿಕೊಳ್ಳುವವರನ್ನು ನಿನ್ನ ಮಧ್ಯದೊಳಗಿಂದ ತೆಗೆದುಹಾಕುವೆನು. ನನ್ನ ಪರಿಶುದ್ಧ ಪರ್ವತದಲ್ಲಿ ಇನ್ನು ಮೇಲೆ ನೀನು ಗರ್ವಪಡದೇ ಬಾಳುವೆ.