Zephaniah 3:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲಿನಲ್ಲಿ ಉಳಿದವರು ದುಷ್ಕೃತ್ಯಗಳನ್ನು ಮಾಡುವುದಿಲ್ಲ. ಸುಳ್ಳು ಹೇಳುವದಿಲ್ಲ. ಜನರನ್ನು ಮೋಸಗೊಳಿಸುವದಿಲ್ಲ. ಅವರು ಕುರಿಗಳಂತೆ ಮೇದು ವಿಶ್ರಾಂತಿ ತೆಗೆದುಕೊಳ್ಳುವರು. ಯಾರೂ ಅವರ ಗೊಡವೆಗೆ ಹೋಗುವುದಿಲ್ಲ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯವನ್ನು ಮಾಡರು, ಸುಳ್ಳಾಡರು; ಅವರ ಬಾಯಲ್ಲಿ ಮೋಸದ ನಾಲಿಗೆಯು ಇರದು; ಕುರಿ ಮಂದೆಯಂತೆ ಮೇದು ಮಲಗಿಕೊಳ್ಳುವರು, ಅವರನ್ನು ಯಾರೂ ಹೆದರಿಸರು.”
Kannada BSI Bible 2016
ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯಮಾಡುವದಿಲ್ಲ; ಸುಳ್ಳು ಹೇಳುವದಿಲ್ಲ; ಅವರ ಬಾಯಲ್ಲಿ ಮೋಸದ ನಾಲಿಗೆ ಕಾಣುವದಿಲ್ಲ; ಅವರು ಮಂದೆಯಂತೆ ಮೇದು ಮಲಗುವರು; ಭಯಪಡಿಸು ವವನು ಒಬ್ಬನೂ ಇರುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯವನ್ನು ಮಾಡರು, ಸುಳ್ಳಾಡರು; ಅವರ ಬಾಯಲ್ಲಿ ಮೋಸದ ನಾಲಿಗೆಯು ಇರದು; [ಮಂದೆಯಂತೆ] ಮೇದು ಮಲಗಿಕೊಳ್ಳುವರು, ಅವರನ್ನು ಯಾರೂ ಹೆದರಿಸರು.
Kannada Bible (KNCL) BSI 2016
ಇಸ್ರಯೇಲಿನಲ್ಲಿ ಅಳಿದುಳಿದವರು ಅನ್ಯಾಯಮಾಡರು, ಸುಳ್ಳಾಡರು. ಅವರ ಬಾಯಲ್ಲಿ ಮೋಸವಿರದು. ಕುರಿಮಂದೆಯಂತೆ ಮೇದು ಸುರಕ್ಷಿತವಾಗಿರುವರು. ಅವರನ್ನು ಯಾರೂ ಹೆದರಿಸರು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯ ಮಾಡರು; ಸುಳ್ಳಾಡರು, ಅವರ ಬಾಯಲ್ಲಿ ಮೋಸವಿರದು. ಅವರು ಮಂದೆಯಂತೆ ಮೇದು ಮಲಗುವರು. ಅವರನ್ನು ಭಯಪಡಿಸುವವನು ಒಬ್ಬನೂ ಇರುವುದಿಲ್ಲ.”