Zephaniah 3:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜೆರುಸಲೇಮೇ, ಹಾಡುತ್ತಾ ಸಂತೋಷಿಸುತ್ತಿರು. ಇಸ್ರೇಲೇ, ಸಂತೋಷದಿಂದ ಆರ್ಭಟಿಸು. ಜೆರುಸಲೇಮೇ, ಸಂತೋಷದಿಂದಿದ್ದು ಉಲ್ಲಾಸಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚೀಯೋನ್ ಕುವರಿಯೇ, ಹರ್ಷಧ್ವನಿಗೈ! ಇಸ್ರಾಯೇಲೇ, ಜಯಘೋಷಮಾಡು! ಯೆರೂಸಲೇಮ್ ಕುವರಿಯೇ, ಹೃದಯಪೂರ್ವಕವಾಗಿ ಆನಂದಿಸು, ಉಲ್ಲಾಸಿಸು!
Kannada BSI Bible 2016
ಓ ಚೀಯೋನಿನ ಕುಮಾರ್ತೆಯೇ, ಹಾಡು; ಇಸ್ರಾಯೇಲೇ ಆರ್ಭಟಿಸು; ಯೆರೂಸಲೇಮಿನ ಕುಮಾರ್ತೆಯೇ, ಪೂರ್ಣಹೃದಯ ದಿಂದ ಸಂಭ್ರಮಿಸಿ ಉಲ್ಲಾಸಪಡು.
Kannada BSI JV (ಕನ್ನಡ ಸತ್ಯವೇದವು J.V. (BSI))
ಚೀಯೋನ್ ನಗರಿಯೇ, ಹರ್ಷಧ್ವನಿಗೈ! ಇಸ್ರಾಯೇಲೇ, ಆರ್ಭಟಿಸು! ಯೆರೂಸಲೇಮ್ ಪುರಿಯೇ, ಹೃದಯಪೂರ್ವಕವಾಗಿ ಆನಂದಿಸು, ಉಲ್ಲಾಸಿಸು!
Kannada Bible (KNCL) BSI 2016
ಹರ್ಷಧ್ವನಿಗೈ, ಸಿಯೋನ್ ಕುವರಿಯೇ ಘೋಷಿಸು, ಇಸ್ರಯೇಲ್ ದೇಶವೇ, ಹೃತ್ಪೂರ್ವಕವಾಗಿ ಸಂತೋಷಿಸು, ಜೆರುಸಲೇಮ್ ನಗರವೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಚೀಯೋನಿನ ಪುತ್ರಿಯೇ, ಹಾಡು. ಇಸ್ರಾಯೇಲೇ ಆರ್ಭಟಿಸು; ಯೆರೂಸಲೇಮಿನ ಪುತ್ರಿಯೇ, ಪೂರ್ಣಹೃದಯದಿಂದ ಸಂಭ್ರಮಿಸಿ ಉಲ್ಲಾಸಪಡು.