Zephaniah 3:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಕೆಂದರೆ ನಿನ್ನ ಯೆಹೋವನು ನಿನ್ನ ಶಿಕ್ಷೆಯನ್ನು ನಿಲ್ಲಿಸಿದ್ದಾನೆ. ನಿನ್ನ ವೈರಿಗಳ ಬಲವಾದ ಬುರುಜುಗಳನ್ನು ನಾಶಮಾಡಿದ್ದಾನೆ. ಇಸ್ರೇಲಿನ ರಾಜನೇ, ನಿನ್ನ ದೇವರು ನಿನ್ನೊಂದಿಗಿದ್ದಾನೆ. ನಿನಗೆ ಕೆಟ್ಟದ್ದು ಸಂಭವಿಸುತ್ತದೆಂದು ನೀನು ಚಿಂತಿಸದಿರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನಗೆ ವಿಧಿಸಿದ ದಂಡನೆಯನ್ನು ಯೆಹೋವನು ತಪ್ಪಿಸಿದ್ದಾನೆ, ನಿನ್ನ ಶತ್ರುವನ್ನು ತಳ್ಳಿಬಿಟ್ಟಿದ್ದಾನೆ; ಇಸ್ರಾಯೇಲಿನ ಅರಸನಾದ ಯೆಹೋವನು ನಿನ್ನ ಮಧ್ಯದಲ್ಲಿದ್ದಾನೆ; ಇನ್ನು ಕೇಡಿಗೆ ಅಂಜದಿರುವಿ.
Kannada BSI Bible 2016
ಕರ್ತನು ನಿನ್ನ ನ್ಯಾಯ ತೀರ್ವಿಕೆಗಳನ್ನು ದೂರಮಾಡಿ ನಿನ್ನ ಶತ್ರು ವನ್ನು ತೆಗೆದುಹಾಕಿದ್ದಾನೆ; ಇಸ್ರಾಯೇಲಿನ ಅರಸನಾದ ಕರ್ತನು ನಿನ್ನ ಮಧ್ಯದಲ್ಲಿ ಇದ್ದಾನೆ; ಇನ್ನು ಮೇಲೆ ನೀನು ಕೇಡನ್ನು ನೋಡುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನಗೆ ವಿಧಿಸಿದ ದಂಡನೆಗಳನ್ನು ಯೆಹೋವನು ತಪ್ಪಿಸಿದ್ದಾನೆ, ನಿನ್ನ ಶತ್ರುವನ್ನು ತಳ್ಳಿಬಿಟ್ಟಿದ್ದಾನೆ; ಇಸ್ರಾಯೇಲಿನ ಅರಸನಾದ ಯೆಹೋವನು ನಿನ್ನ ಮಧ್ಯದಲ್ಲಿದ್ದಾನೆ; ಇನ್ನು ಕೇಡಿಗೆ ಅಂಜದಿರುವಿ.
Kannada Bible (KNCL) BSI 2016
ತಪ್ಪಿಸಿಹನು ಸರ್ವೇಶ ನಿನಗೆ ವಿಧಿಸಿರುವ ದಂಡನೆಗಳನು ತಳ್ಳಿ ಹೊರಗಟ್ಟಿಹನು ನಿನ್ನ ಶತ್ರುಗಳನು ಇಸ್ರಯೇಲಿನ ರಾಜನಾದ ಸರ್ವೇಶ ಇಹನು ನಿನ್ನ ಮಧ್ಯೆ ನೀನಿರುವೆ ಇನ್ನೆಂದಿಗೂ ಕೇಡಿಗಂಜದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ನಿನ್ನ ಶಿಕ್ಷೆಗಳನ್ನು ದೂರಮಾಡಿ ನಿನ್ನ ಶತ್ರುವನ್ನು ತೆಗೆದುಹಾಕಿದ್ದಾರೆ. ಇಸ್ರಾಯೇಲಿನ ಅರಸನಾದ ಯೆಹೋವ ದೇವರು ನಿನ್ನ ಮಧ್ಯದಲ್ಲಿ ಇದ್ದಾರೆ. ಇನ್ನು ಮೇಲೆ ನಿನಗೆ ಯಾವ ಕೇಡಿನ ಭಯವಿರುವುದಿಲ್ಲ.