Zephaniah 3:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನ ನಾಚಿಕೆಯನ್ನು ತೆಗೆದುಬಿಡುವನು. ನಿನ್ನನ್ನು ಹಿಂಸಿಸುವ ಜನರನ್ನು ನಿಲ್ಲಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವಮಾನವು ನಮ್ಮ ಪಟ್ಟಣದ ಮೇಲೆ ಹೊರೆಯಾಗಿ ಕಾಡುತ್ತಿದೆ ಎಂದು ತಿಳಿದು ಹಬ್ಬ ಉತ್ಸವಗಳಿಗೆ ದೂರವಾಗಿ ಶೋಕಿಸುತ್ತಿರುವ ನಿನ್ನವರನ್ನು ಒಟ್ಟಿಗೆ ಬರಮಾಡುವೆನು.
Kannada BSI Bible 2016
ಪರಿಶುದ್ಧ ಸಭೆಯ ವಿಷಯವಾಗಿ ವ್ಯಸನ ಪಡುವವರನ್ನು ನಾನು ಕೂಡಿಸುತ್ತೇನೆ; ಅವರು ನಿನ್ನವರೇ; ಅವರ ಮೇಲೆ ನಿಂದೆ ಭಾರವಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಯ್ಯೋ, ಅವಮಾನವು ನಮ್ಮ ಪಟ್ಟಣದ ಮೇಲೆ ಹೊರೆಯಾಗಿ ಕೂತಿದೆ ಎಂದು ಮಹೋತ್ಸವಕ್ಕೆ ದೂರವಾಗಿ ಶೋಕಿಸುತ್ತಿರುವ ನಿನ್ನವರನ್ನು ಒಟ್ಟಿಗೆ ಬರಮಾಡುವೆನು.
Kannada Bible (KNCL) BSI 2016
ತಡೆದುಬಿಡುವನು ಸರ್ವವಿನಾಶವನು ದೂರಮಾಡುವನು ನಿನ್ನಿಂದ ನಿಂದೆ ಅಪಮಾನವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೇಮಕವಾದ ಹಬ್ಬಗಳ ನಷ್ಟಕ್ಕಾಗಿರುವ ನಿಮ್ಮ ದುಃಖವನ್ನು ನಿಮ್ಮಿಂದ ನಾನು ತೆಗೆದುಬಿಡುವೆನು. ಅವು ನಿನಗೆ ಭಾರವಾಗಿಯೂ ನಿಂದೆಯಾಗಿಯೂ ಇದ್ದವು.