Zephaniah 3:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸಮಯದಲ್ಲಿ, ನಿನಗೆ ಕೇಡುಮಾಡುವವರನ್ನು ಶಿಕ್ಷಿಸುವೆನು. ಗಾಯಗೊಂಡಿರುವ ನಿನ್ನ ಜನರನ್ನು ರಕ್ಷಿಸುವೆನು. ತಮ್ಮ ದೇಶದಿಂದ ದೂರಕ್ಕೆ ಚದರಿಸಲ್ಪಟ್ಟ ಜನರನ್ನು ನಾನು ಹಿಂದಕ್ಕೆ ಕರೆದುಕೊಂಡು ಬರುವೆನು. ನಾನು ಅವರನ್ನು ಪ್ರಸಿದ್ಧಿಪಡಿಸುವೆನು. ಎಲ್ಲಾ ಜನರು ಅವರನ್ನು ಹೊಗಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾ, ಆ ಕಾಲದಲ್ಲಿ ನಿನ್ನನ್ನು ಬಾಧಿಸುವವರಿಗೆ ತಕ್ಕದ್ದನ್ನು ಮಾಡುವೆನು; ನಿನ್ನಲ್ಲಿ ಕುಂಟುವವರನ್ನು ರಕ್ಷಿಸುವೆನು, ಚದರಿ ಹೋದವರನ್ನು ಕೂಡಿಸುವೆನು; ಅಂತು ಲೋಕದಲ್ಲೆಲ್ಲಾ ಅವಮಾನಪಟ್ಟವರಿಗೆ ಸ್ತೋತ್ರ ಕೀರ್ತನೆಗಳನ್ನು ಉಂಟುಮಾಡುವೆನು.
Kannada BSI Bible 2016
ಇಗೋ, ಆ ಕಾಲದಲ್ಲಿ ನಿನ್ನನ್ನು ಶ್ರಮೆ ಪಡಿಸುವವರನ್ನೆಲ್ಲಾ ತೀರಿಸಿಬಿಟ್ಟು, ಕುಂಟಾದ ದ್ದನ್ನು ರಕ್ಷಿಸಿ, ಹೊರಡಿಸಲ್ಪಟ್ಟವರನ್ನು ಕೂಡಿಸಿ, ಅವರಿಗೆ ನಾಚಿಕೆಯಾದ ದೇಶಗಳಲ್ಲೆಲ್ಲಾ ಹೊಗಳಿಕೆಯನ್ನೂ ಕೀರ್ತಿಯನ್ನೂ ಉಂಟುಮಾಡುವೆನು.ಆ ಕಾಲದಲ್ಲಿ ಅಂದರೆ ನಾನು ನಿಮ್ಮನ್ನು ಕೂಡಿಸುವ ಕಾಲದಲ್ಲಿ ನಿಮ್ಮನ್ನು ಕರಕೊಂಡು ಬರುವೆನು; ನಾನು ನಿಮ್ಮ ಸೆರೆಯನ್ನು ನಿಮ್ಮ ಕಣ್ಣುಗಳ ಮುಂದೆ ತಿರುಗಿಸುವಾಗ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆ ಯನ್ನೂ ಉಂಟುಮಾಡುವೆನು ಎಂದು ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, ಆ ಕಾಲದಲ್ಲಿ ನಿನ್ನನ್ನು ಬಾಧಿಸುವವರಿಗೆ ತಕ್ಕದ್ದನ್ನು ಮಾಡುವೆನು; ನಿನ್ನಲ್ಲಿ ಕುಂಟುವವರನ್ನು ಉದ್ಧರಿಸುವೆನು, ಚದರಿಸಲ್ಪಟ್ಟವರನ್ನು ಕೂಡಿಸುವೆನು; ಅಂತು ಲೋಕದಲ್ಲೆಲ್ಲಾ ಅವಮಾನಪಟ್ಟವರಿಗೆ ಸ್ತೋತ್ರಕೀರ್ತಿಗಳನ್ನು ಉಂಟುಮಾಡುವೆನು.
Kannada Bible (KNCL) BSI 2016
ಆ ದಿನದಲಿ ಇಂತೆನ್ನುವನು: “ದಂಡಿಸುವೆನು ನಿನ್ನನು ಬಾಧಿಸಿದವರನು ಉದ್ಧರಿಸುವೆನು ನಿನ್ನಲ್ಲಿ ಕುಂಟುವವರನು ಒಂದುಗೂಡಿಸುವೆನು ಚದರಿಹೋದವರನು ಬರಮಾಡುವೆನು ಅವಮಾನಿತರಿಗೆ ಸನ್ಮಾನವನು ಗಿಟ್ಟಿಸುವೆನು ನಿಮಗೆ ಜಗದಲ್ಲೆಲ್ಲ ಕೀರ್ತಿಯನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಕಾಲದಲ್ಲಿ ನಿನ್ನನ್ನು ಪೀಡಿಸುವವರನ್ನೆಲ್ಲಾ ದಂಡಿಸುವೆನು, ಕುಂಟಾದದ್ದನ್ನು ರಕ್ಷಿಸಿ, ಚದರಿಹೋದವರನ್ನು ಕೂಡಿಸುವೆನು; ಅವರು ಅವಮಾನ ಹೊಂದಿದ ದೇಶಗಳಲ್ಲೆಲ್ಲಾ ಅವರಿಗೆ ಹೊಗಳಿಕೆಯನ್ನೂ ಕೀರ್ತಿಯನ್ನೂ ಉಂಟುಮಾಡುವೆನು.