Zephaniah 3:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನ ಜನರು ನನ್ನ ಮಾತುಗಳನ್ನು ಕೇಳಲಿಲ್ಲ. ನನ್ನ ಬೋಧನೆಯನ್ನು ಸ್ವೀಕರಿಸಲಿಲ್ಲ. ಜೆರುಸಲೇಮ್ ದೇವರ ಮೇಲೆ ಭರವಸವಿಡಲಿಲ್ಲ. ಆತನ ಬಳಿಗೆ ಹೋಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ದೇವರ ವಾಕ್ಯಕ್ಕಾಗಲೀ ಆತನ ತಿದ್ದುಪಾಟಿಗಾಗಲಿ ಕಿವಿಗೊಡಲಿಲ್ಲ, ಶಿಕ್ಷಣಕ್ಕೆ ಒಳಪಡಲೇ ಇಲ್ಲ, ಯೆಹೋವನಲ್ಲಿ ಭರವಸವಿಡಲಿಲ್ಲ, ತನ್ನ ದೇವರ ಸನ್ನಿಧಿಗೆ ಸಮೀಪಿಸಲಿಲ್ಲ.
Kannada BSI Bible 2016
ಅವಳು ಶಬ್ದಕ್ಕೆ ವಿಧೇಯಳಾಗಲಿಲ್ಲ, ಶಿಕ್ಷೆಗೆ ಒಳಪಡಲಿಲ್ಲ, ಕರ್ತನಲ್ಲಿ ಭರವಸವಿಡ ಲಿಲ್ಲ. ತನ್ನ ದೇವರ ಸವಿಾಪಕ್ಕೆ ಬರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ದೈವೋಕ್ತಿಗೆ ಕಿವಿಗೊಡಲಿಲ್ಲ, ಶಿಕ್ಷಣೆಗೆ ಒಳಪಡಲಿಲ್ಲ, ಯೆಹೋವನಲ್ಲಿ ಭರವಸವಿಡಲಿಲ್ಲ, ತನ್ನ ದೇವರ ಸನ್ನಿಧಿಗೆ ಸಮೀಪಿಸಲಿಲ್ಲ.
Kannada Bible (KNCL) BSI 2016
ಅದು ಯಾರ ಬುದ್ಧಿಮಾತಿಗೂ ಕಿವಿಗೊಡಲಿಲ್ಲ. ಶಿಕ್ಷಣಕ್ಕೆ ಒಳಪಡಲಿಲ್ಲ. ಸರ್ವೇಶ್ವರಸ್ವಾಮಿಯಲ್ಲಿ ಭರವಸೆ ಇಡಲಿಲ್ಲ, ತನ್ನ ದೇವರ ಸನ್ನಿಧಿಗೆ ಬರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವಳು ಯಾರಿಗೂ ವಿಧೇಯಳಾಗಲಿಲ್ಲ; ಶಿಕ್ಷೆಯನ್ನು ತೆಗೆದುಕೊಳ್ಳಲಿಲ್ಲ; ಯೆಹೋವ ದೇವರಲ್ಲಿ ಭರವಸೆ ಇಡಲಿಲ್ಲ; ತನ್ನ ದೇವರ ಸಮೀಪಕ್ಕೆ ಬರಲಿಲ್ಲ.