Zephaniah 3:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರ ಪ್ರವಾದಿಗಳು ಬಡಾಯಿಗಾರರೂ ದ್ರೋಹಿಗಳೂ ಆಗಿದ್ದಾರೆ. ಅವರು ಯಾವಾಗಲೂ ಇನ್ನೂಇನ್ನೂ ಹೆಚ್ಚಾಗಿ ದೊರಕುವಂತೆ ಪ್ರಯತ್ನಿಸಿರುತ್ತಾರೆ. ಅವರ ಯಾಜಕರು ಪವಿತ್ರ ವಸ್ತುಗಳನ್ನು ಸಾಧಾರಣ ವಸ್ತುಗಳನ್ನಾಗಿ ಉಪಯೋಗಿಸಿದ್ದಾರೆ. ದೇವರ ನಿಯಮಗಳನ್ನು ನಿರ್ಲಕ್ಷಿಸಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿರುವ ಪ್ರವಾದಿಗಳು ಬಡಾಯಿ ಕೊಚ್ಚಿಕೊಳ್ಳುವವರು, ವಿಶ್ವಾಸ ದ್ರೋಹಿಗಳು; ಅದರ ಯಾಜಕರು ಪವಿತ್ರಾಲಯವನ್ನು ಹೊಲೆಗೆಡಿಸಿದ್ದಾರೆ, ಧರ್ಮವಿಧಿಗಳನ್ನು ಭಂಗಮಾಡಿದ್ದಾರೆ.
Kannada BSI Bible 2016
ಅದರ ಪ್ರವಾದಿಗಳು ಹಗುರವಾಗಿಯೂ ವಂಚಕರಾಗಿಯೂ ಇದ್ದಾರೆ; ಅದರ ಯಾಜಕರು ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಿ ದ್ದಾರೆ; ನ್ಯಾಯಪ್ರಮಾಣಕ್ಕೆ ಬಲಾತ್ಕಾರಮಾಡಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರ ಪ್ರವಾದಿಗಳು ಬಡಾಯಿಗಾರರು, ದ್ರೋಹಿಗಳು; ಅದರ ಯಾಜಕರು ಪವಿತ್ರಾಲಯವನ್ನು ಹೊಲೆಗೆಡಿಸಿದ್ದಾರೆ, ಧರ್ಮವಿಧಿಗಳನ್ನು ಭಂಗಮಾಡಿದ್ದಾರೆ.
Kannada Bible (KNCL) BSI 2016
ಅದರ ಪ್ರವಾದಿಗಳು ಬಡಾಯಿಕೊಚ್ಚುವವರು, ವಿಶ್ವಾಸದ್ರೋಹಿಗಳು. ಅದರ ಯಾಜಕರು ಪವಿತ್ರವಾದುದನ್ನು ಹೊಲೆಗೆಡಿಸುವಂಥವರು, ಧರ್ಮವಿಧಿಗಳನ್ನು ಭಂಗಪಡಿಸುವಂಥವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವಳ ಪ್ರವಾದಿಗಳು ಬಡಾಯಿ ಕೊಚ್ಚಿಕೊಳ್ಳುವವರೂ ವಿಶ್ವಾಸದ್ರೋಹಿಗಳೂ ಆಗಿದ್ದಾರೆ. ಅವಳ ಯಾಜಕರು ಪರಿಶುದ್ಧ ಸ್ಥಳವನ್ನು ಅಪವಿತ್ರಮಾಡುತ್ತಾರೆ, ದೈವನಿಯಮವನ್ನು ಭಂಗಪಡಿಸುತ್ತಾರೆ.