Zephaniah 3:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ದೇವರು ಇನ್ನೂ ಆ ನಗರದಲ್ಲಿದ್ದಾನೆ. ಅವರಿಗೆ ಇನ್ನೂ ಒಳ್ಳೆಯದನ್ನೇ ಮಾಡುತ್ತಿದ್ದಾನೆ. ಆತನು ತಪ್ಪು ಕಾರ್ಯಗಳನ್ನು ಮಾಡುವವನಲ್ಲ. ತನ್ನ ಜನರಿಗೆ ಸಹಾಯ ಮಾಡುತ್ತಿರುತ್ತಾನೆ. ಪ್ರತಿ ದಿನವೂ ಸರಿಯಾದ ತೀರ್ಮಾನ ಮಾಡಲು ತನ್ನ ಜನರಿಗೆ ಸಹಾಯ ಮಾಡುತ್ತಾನೆ. ಆದರೆ ಆ ದುಷ್ಟಜನರು ತಮ್ಮ ದುಷ್ಟತನಕ್ಕಾಗಿ ನಾಚಿಕೆಪಡುತ್ತಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರ ಮಧ್ಯ ನೆಲೆಗೊಂಡಿರುವ ಯೆಹೋವನು ನೀತಿಸ್ವರೂಪನು; ಎಂದಿಗೂ ಅನ್ಯಾಯವನ್ನು ಮಾಡನು; ಪ್ರತಿ ಬೆಳಿಗ್ಗೆ ತನ್ನ ನ್ಯಾಯವನ್ನು ತಪ್ಪದೆ ಪ್ರಕಾಶಗೊಳಿಸುವನು; ಅನ್ಯಾಯಗಾರನೋ ನಾಚಿಕೆಪಡುವುದಿಲ್ಲ.
Kannada BSI Bible 2016
ನೀತಿ ಯುಳ್ಳ ಕರ್ತನು ಅದರ ಮಧ್ಯದಲ್ಲಿ ಇದ್ದಾನೆ, ಆತನು ಅನ್ಯಾಯಮಾಡುವದಿಲ್ಲ; ಪ್ರತಿ ಬೆಳಿಗ್ಗೆ ತನ್ನ ನ್ಯಾಯ ತೀರ್ಪನ್ನು ಬೆಳಕಿಗೆ ತರುತ್ತಾನೆ; ಆತನು ತಪ್ಪುವಾತನಲ್ಲ, ಆದರೆ ಅನ್ಯಾಯವಂತನು ನಾಚಿಕೆ ಯನ್ನು ಅರಿಯನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರ ಮಧ್ಯೆ ನೆಲೆಗೊಂಡಿರುವ ಯೆಹೋವನು ನ್ಯಾಯಸ್ವರೂಪನು; ಎಂದಿಗೂ ಅನ್ಯಾಯವನ್ನು ಮಾಡನು; ಬೆಳಬೆಳಿಗ್ಗೆ ತನ್ನ ನ್ಯಾಯವನ್ನು ತಪ್ಪದೆ ಪ್ರಕಾಶಗೊಳಿಸುವನು; ಅನ್ಯಾಯಗಾರನೋ ನಾಚಿಕೆಪಡನು.
Kannada Bible (KNCL) BSI 2016
ಆದರೆ ಅದರ ಮಧ್ಯೆಯಿರುವ ಸರ್ವೇಶ್ವರ ನ್ಯಾಯಸ್ವರೂಪಿ, ಎಂದಿಗೂ ಅನ್ಯಾಯ ಮಾಡುವುದಿಲ್ಲ. ದಿನದಿನವೂ ತಪ್ಪದೆ ನ್ಯಾಯ ದೊರಕಿಸುತ್ತಾರೆ. ಅವರಿಗೆ ಗುಟ್ಟಾಗಿರುವುದು ಯಾವುದೂ ಇಲ್ಲ. ಅನ್ಯಾಯಮಾಡುವವನಿಗಾದರೋ ನಾಚಿಕೆ ಎಂಬುದೇ ಇಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀತಿಯುಳ್ಳ ಯೆಹೋವ ದೇವರು ಅವಳ ಮಧ್ಯದಲ್ಲಿ ಇದ್ದಾರೆ. ಅವರು ಅನ್ಯಾಯ ಮಾಡುವುದಿಲ್ಲ; ಪ್ರತಿ ಬೆಳಿಗ್ಗೆ ತಮ್ಮ ನ್ಯಾಯತೀರ್ಪನ್ನು ಬೆಳಕಿಗೆ ತರುತ್ತಾರೆ; ಅವರು ತಪ್ಪುವವರಲ್ಲ. ಆದರೆ ಅನ್ಯಾಯವಂತನು ನಾಚಿಕೆಯನ್ನು ಅರಿಯನು.