Zephaniah 3:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ನಾನು ಇತರ ಜನಾಂಗಗಳವರ ಭಾಷೆಯನ್ನು ಬದಲಾಯಿಸಿ ದೇವರಾದ ಯೆಹೋವನ ನಾಮವನ್ನು ಉಚ್ಚರಿಸುವಂತೆ ಮಾಡುವೆನು. ಅವರೆಲ್ಲರೂ ನನ್ನನ್ನು ಆರಾಧಿಸುವರು. ಒಟ್ಟಾಗಿ ಸೇರಿ ಒಂದೇ ಜನಾಂಗವಾಗಿ ನನ್ನನ್ನು ಆರಾಧಿಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆಗ ಎಲ್ಲರೂ ಒಂದೇ ಮನಸ್ಸಿನಿಂದ ಯೆಹೋವನನ್ನು ಸೇವಿಸಿ ಆತನ ಹೆಸರನ್ನೆತ್ತಿ ಪ್ರಾರ್ಥಿಸುವಂತೆ ಜನಾಂಗಗಳವರ ತುಟಿಗಳನ್ನು ಮಾರ್ಪಡಿಸಿ ಶುದ್ಧಿಮಾಡುವೆನು.
Kannada BSI Bible 2016
ಆಗ ನಾನು ಶುದ್ಧ ಭಾಷೆಯನ್ನು ಜನಾಂಗಗಳಿಗೆ ತಿರುಗಿ ಕೊಡುವೆನು; ಅವರೆಲ್ಲರು ಕರ್ತನ ಹೆಸರಿನಲ್ಲಿ ಮೊರೆಯಿಟ್ಟು ಏಕ ಮನಸ್ಸಿನಿಂದ ಆತನಿಗೆ ಸೇವೆ ಮಾಡು ವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಎಲ್ಲರು ಒಂದೇ ಮನಸ್ಸಿನಿಂದ ಯೆಹೋವನನ್ನು ಸೇವಿಸಿ ಆತನ ಹೆಸರನ್ನೆತ್ತಿ ಪ್ರಾರ್ಥಿಸುವಂತೆ ಜನಾಂಗಗಳವರ ತುಟಿಗಳನ್ನು ಮಾರ್ಪಡಿಸಿ ಶುದ್ಧಿಮಾಡುವೆನು.
Kannada Bible (KNCL) BSI 2016
“ಆಗ ಎಲ್ಲರೂ ಒಮ್ಮನಸ್ಸಿನಿಂದ ನನ್ನನ್ನು ಪೂಜಿಸಿ ನನ್ನ ಹೆಸರೆತ್ತಿ ಪ್ರಾರ್ಥಿಸುವಂತೆ ಜನಾಂಗಗಳ ಬಾಯನ್ನು ಪರಿವರ್ತಿಸಿ ಶುದ್ಧೀಕರಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆಗ ನಾನು ಜನರ ತುಟಿಗಳನ್ನು ಶುದ್ಧೀಕರಿಸುವೆನು. ಅವರೆಲ್ಲರೂ ಯೆಹೋವ ದೇವರ ಹೆಸರಿನಿಂದ ಮೊರೆಯಿಡುವರು. ಏಕಮನಸ್ಸಿನಿಂದ ಆತನಿಗೆ ಸೇವೆಮಾಡುವರು.